ಕರ್ನಾಟಕ

karnataka

ETV Bharat / state

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕಡ್ಡಾಯ ಕನ್ನಡ ಪರೀಕ್ಷೆ: ಪಾಸ್ ಆದ್ರಷ್ಟೇ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ - KANNADA LANGUAGE EXAM - KANNADA LANGUAGE EXAM

ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೊದಲು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣ ಆದಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಅವಕಾಶ ಸಿಗಲಿದೆ.

kannada-language-exam
ಕಡ್ಡಾಯ ಕನ್ನಡ ಪರೀಕ್ಷೆ (ETV Bharat)

By ETV Bharat Karnataka Team

Published : Aug 21, 2024, 7:27 AM IST

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ.26ರೊ ಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸಲ್ಲಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ಈ ಬಗ್ಗೆ ಸೂಚನೆ ನೀಡಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ ಎಂದಿದ್ದಾರೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು ಎಂದು ಅವರು ಹೇಳಿದ್ದಾರೆ.

ಕಡ್ಡಾಯ ಕನ್ನಡ ಪರೀಕ್ಷೆ:ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಂಡು ಈ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕೆಂದು ಸೂಚಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ರ ಅನ್ವಯ, ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ- 1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟ - CET OR NEET SEAT ALLOTMENT RESULTS

ABOUT THE AUTHOR

...view details