ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಡಿ.20 ರಿಂದ 22ರವರೆಗೆ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ ಸಿದ್ದರಾಮಯ್ಯ - Kannada literature conference - KANNADA LITERATURE CONFERENCE

ಡಿಸೆಂಬರ್‌ ತಿಂಗಳಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

meeting on Kannada literature conference
ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ (ETV Bharat)

By ETV Bharat Karnataka Team

Published : Jun 25, 2024, 2:27 PM IST

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ, ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನವನ್ನು 1974ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63ನೇ ಸಾಹಿತ್ಯ ಸಮ್ಮೇಳನವನ್ನು 1994ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ 3ನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ರಾಜ್ಯದ ಜನತೆಗೆ ಮತ್ತೊಂದು ಶಾಕ್​: ಹಾಲಿನ ದರ ಪ್ರತಿ ಲೀಟರ್​ಗೆ 2 ರೂ. ಹೆಚ್ಚಳ! - MILK PRICE HIKE

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ತಮಿಳುನಾಡು ನಕಲಿ ಮದ್ಯ ದುರಂತ: ಗಂಡಂದಿರನ್ನು ಕಳೆದುಕೊಂಡ 44 ಮಹಿಳೆಯರು! - Tamil Nadu Hooch Tragedy

ನೆರೆ ರಾಜ್ಯಗಳ ದರಕ್ಕೆ ಅನುಗುಣವಾಗಿ ಹಾಲಿನ ಬೆಲೆ ಏರಿಕೆ: ಇದೇ ವೇಳೆ ಹಾಲಿನ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆಎಂಎಫ್ ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು.

ABOUT THE AUTHOR

...view details