ಕರ್ನಾಟಕ

karnataka

ETV Bharat / state

ಪೊಲೀಸ್ ಠಾಣೆ ಮೆಟ್ಟಿಲೇರಿದ 'ಮಂಗಳಗೌರಿ ಮದುವೆ' ಧಾರಾವಾಹಿ ನಿರ್ದೇಶಕ - DIRECTOR KS RAMJI FILES FIR

ನನ್ನ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆ ತೆರೆದು, ತೇಜೋವಧೆ ನಡೆಯುತ್ತಿದೆ ಎಂದು ಖ್ಯಾತ ಕಿರುತೆರೆ ನಿರ್ದೇಶಕ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

kannada-serial-director-ks-ramji-file-fir-in-bangalore-west-cen-station
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Jan 31, 2025, 12:18 PM IST

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಕಿರುತೆರೆಯ ಪ್ರಖ್ಯಾತ ನಿರ್ದೇಶಕ ಕೆ‌.ಎಸ್.ರಾಮ್‌ ಜೀ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ರಾಮಾಚಾರಿ' ಧಾರಾವಾಹಿಯ ನಿರ್ದೇಶಕ ಕೆ.ಎಸ್.ರಾಮ್ ಜೀ ನೀಡಿರುವ ದೂರಿನನ್ವಯ ಬೆಂಗಳೂರು ಪಶ್ಚಿಮ ಸಿಇಎನ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಜನವರಿ 24ರಂದು ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ರಾಮ್ ಜೀ ಫೋಟೋ ಬಳಸಿರುವ ಕಿಡಿಗೇಡಿಗಳು, ಅವರ ವಿರುದ್ಧ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ. ಈ ರೀತಿ ಸುಳ್ಳು ಆರೋಪ ಮಾಡುತ್ತಿರುವ ಖಾತೆ ಸೃಷ್ಟಿಸಿರುವ ಅಪರಿಚಿತನನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವಂತೆ ರಾಮ್ ಜೀ ದೂರಿನಲ್ಲಿ ಒತ್ತಾಯಿಸಿದ್ದಾರೆ.

'ರಾಮಾಚಾರಿ', 'ಮಂಗಳಗೌರಿ ಮದುವೆ' ಸೇರಿದಂತೆ ಕೆಲ ಧಾರಾವಾಹಿಗಳ ನಿರ್ದೇಶನ ಮಾಡಿರುವ ರಾಮ್ ಜೀ ಹೆಜ್ಜಾರು ಎಂಬ ಕನ್ನಡ ಸಿನಿಮಾಗೂ ಸಹ ಆ್ಯಕ್ಷನ್, ಕಟ್ ಹೇಳಿದ್ದಾರೆ.

ಇದನ್ನೂ ಓದಿ:ಪತಿಗೆ ಮಾನಸಿಕ ಕಿರುಕುಳ ಆರೋಪ: ಸ್ಯಾಂಡಲ್​ವುಡ್ ಪೋಷಕ ನಟಿ ವಿರುದ್ಧ ಎಫ್ಐಆರ್

ABOUT THE AUTHOR

...view details