ತುಮಕೂರು:ನಾನು ಯಾವುದೇ ಕಾರಣಕ್ಕೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ, ಇದು ಕೇವಲ ಊಹಾಪೋಹ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು - ಉಡುಪಿ ಕ್ಷೇತ್ರದಿಂದಲ್ಲೇ ಸ್ಪರ್ಧೆ ಮಾಡ್ತೀನಿ. ನಾನು ಇವತ್ತು ಕೊಬ್ಬರಿ ಬೆಳೆಗಾರರ ಕಾರ್ಯಕ್ರಮಕ್ಕಾಗಿ, ನಫೇಡ್ ಕೇಂದ್ರ ಉದ್ಘಾಟನೆಗಾಗಿ ತುಮಕೂರಿಗೆ ಬಂದಿದ್ದೇನೆ. ಇಲ್ಲಿಂದ ಸ್ಪರ್ಧೆ ಮಾಡುವ ಯೋಚನೆಯಿಲ್ಲ ಎಂದು ಸ್ಪಷ್ಟನೆ ನೀಡಿದರು. ಪ್ರತಿ ಕ್ವಿಂಟಾಲ್ ಕೊಬ್ಬರಿ ಖರೀದಿಗೆ 12 ಸಾವಿರ ರೂಪಾಯಿ ಘೋಷಣೆ ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ದಾಖಲೆ ಕೊಡಲಿ ಎಂದು ಇದೇ ವೇಳೆ ಹೇಳಿದರು.
ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ: ಶೋಭಾ ಕರಂದ್ಲಾಜೆ - ತುಮಕೂರು ಲೋಕಸಭಾ ಕ್ಷೇತ್ರ
ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.
Published : Jan 24, 2024, 7:16 PM IST
ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಾತಿನ ಚಕಮಕಿ:ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿ ಉಂಡೆ ಕೊಬ್ಬರಿ ಖರೀದಿ ಕೇಂದ್ರದ ಬಳಿ ಬಿಜೆಪಿ ಧ್ವಜ ಹಿಡಿದಿದ್ದ ಕಾರ್ಯಕರ್ತರಿಗೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಎಪಿಎಂಸಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ನಡೆಯಿತು. ಇದರಿಂದಾಗಿ ಸ್ಥಳದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಮಾತಿನ ಚಕಮಕಿ ಕೂಡಾ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ಸಮಾಧಾನಪಡಿಸುವಲ್ಲಿ ಹರಸಾಹಸ ಪಟ್ಟರು. ಉಂಡೆ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟನೆಗೆ ಬಂದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಗೃಹ ಸಚಿವ ಪರಮೇಶ್ವರ್ ಹಾಗೂ ಕೃಷಿ ಸಚಿವ ಶಿವಾನಂದ ಪಾಟೀಲ್ ಕೆಲಕಾಲ ಇದನ್ನು ಕಂಡು ಮೂಕ ವಿಸ್ಮಿತರಾಗಿ ನಿಲ್ಲುವಂತಾಗಿತ್ತು.
ಇದನ್ನೂ ಓದಿ:ತಸ್ತೀಕ್ ಹಣ ವಾಪಸ್ ನೀಡುವಂತೆ ಕಣ್ಣನ್ ಅವರಿಗೆ ನೋಟಿಸ್ ನೀಡಿದ್ದು ತಹಶೀಲ್ದಾರ್ ತಪ್ಪು: ಸಿಎಂ