ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವೇಳಾಪಟ್ಟಿ ಹೀಗಿದೆ: ಏಪ್ರಿಲ್ 29ರಂದು ಕನ್ನಡ, ಏಪ್ರಿಲ್ 30ರಂದು ಇತಿಹಾಸ, ಭೌತಶಾಸ್ತ್ರ, ಮೇ 2ರಂದು ಇಂಗ್ಲಿಷ್, ಮೇ 3ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 4ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಮೇ 9ರಂದು ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮೇ 11ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮೇ 13ರಂದು ಅರ್ಥಶಾಸ್ತ್ರ, ಮೇ 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಮೇ 15ರಂದು ಹಿಂದಿ ವಿಷಯ ಹಾಗು ಮೇ 16ರಂದು ತಮಿಳು ಸೇರಿದಂತೆ ಇತರೆ ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ.