ಕರ್ನಾಟಕ

karnataka

ETV Bharat / state

ಇಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ: ನಿಮ್ಮ ರಿಸಲ್ಟ್​​​ ನೋಡಲು ಹೀಗೆ ಮಾಡಿ - 2nd PUC Result

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏ. 10) ಬಿಡುಗಡೆಯಾಗಲಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಳಗ್ಗೆ 10:00 ಗಂಟೆಗೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದೆ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

By ETV Bharat Karnataka Team

Published : Apr 9, 2024, 7:42 PM IST

Updated : Apr 10, 2024, 10:23 AM IST

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಇಂದು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ‌.

ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಗಿದ್ದು, ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಇಂದು ಬೆಳಗ್ಗೆ ಫಲಿತಾಂಶ ಪ್ರಕಟಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ ಬೆಳಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆದಿದ್ದು, ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಫಲಿತಾಂಶ ಪರಿಶೀಲನೆ ಹೇಗೆ?

  • karresults.nic.in ಅಥವಾ pue.kar.nic ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬೇಕು.
  • ಮುಖಪುಟದಲ್ಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  • ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡಿ
  • ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಕುರಿತು ಆಯ್ಕೆ ಮಾಡಿಕೊಳ್ಳಿ
  • ಕ್ಲಿಕ್ ಮಾಡಿದ ಬಳಿಕ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
  • ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ:SSLC, PUC ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​; ಫೇಲಾದ್ರೆ 3 ಬಾರಿ ಅವಕಾಶ, ಪಾಸಾದವರು ಸಹ ಹೆಚ್ಚು ಅಂಕಕ್ಕಾಗಿ ಪರೀಕ್ಷೆ ಬರೆಯಹುದು

Last Updated : Apr 10, 2024, 10:23 AM IST

ABOUT THE AUTHOR

...view details