ಕರ್ನಾಟಕ

karnataka

ETV Bharat / state

ಸೆಪ್ಟೆಂಬರ್ 28ರಂದು 402 ಪಿಎಸ್ಐ ಪರೀಕ್ಷೆ ಇಲ್ಲ: ಮತ್ತೆ ಮುಂದೂಡಿಕೆ - PSI Exam Postponed - PSI EXAM POSTPONED

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆಪ್ಟೆಂಬರ್ 28ರಂದು ನಡೆಸಬೇಕಿದ್ದ 402 ಪಿಎಸ್ಐ ಹುದ್ದೆಗಳ ಪರೀಕ್ಷೆ ಮತ್ತೆ ಮುಂದೂಡಿಕೆಯಾಗಿದೆ.

psi exam
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Etv Bharat)

By ETV Bharat Karnataka Team

Published : Sep 12, 2024, 8:29 PM IST

ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್​​ 28ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ. 28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ತಿಳಿಸಿದ್ದರು. ಆದರೀಗ, ಮತ್ತೆ ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವರೇ ಮಾಹಿತಿ ನೀಡಿದ್ದಾರೆ.

ಪರೀಕ್ಷೆ ಮುಂದೂಡಿಕೆ ಬಗ್ಗೆ ಗೃಹ ಸಚಿವರ ಸ್ಪಷ್ಟನೆ: ''ನಾನು ಬೆಳಗ್ಗೆ ನಿವಾಸದ ಬಳಿ ಮಾತನಾಡುವಾಗ ಸೆಪ್ಟೆಂಬರ್ 28ರಂದು ಪರೀಕ್ಷೆ ನಡೆಸುವುದಾಗಿ ಹೇಳಿದ್ದೆ. ಆದರೆ, ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಂದೆರಡು ದಿನಗಳಲ್ಲಿ ಸೂಕ್ತವಾದ ದಿನಾಂಕವನ್ನು ಪ್ರಕಟಿಸಲಾಗುವುದು'' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ್ದ ಪರಮೇಶ್ವರ್, "ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಯುಪಿಎಸ್​ಸಿ ಮುಖ್ಯ ಪರೀಕ್ಷೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ನೀಡಿತ್ತು. ಸೆ.28ರಂದು ನಡೆಸಲು ತೀರ್ಮಾನಿಸಲಾಗಿದೆ" ಎಂದು ಹೇಳಿದ್ದರು.

ಇದನ್ನೂ ಓದಿ:NEET: ಎರಡನೇ ಸುತ್ತಿನ ಕೌನ್ಸೆಲಿಂಗ್ ವೇಳೆ 8 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಮಾನ್ಯತೆ - NEET UG 2024

ABOUT THE AUTHOR

...view details