ಬೆಂಗಳೂರು:ವಿಧಾನ ಪರಿಷತ್ನಲ್ಲಿ ತಿರಸ್ಕೃತಗೊಂಡಿದ್ದ 'ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ'ಕ್ಕೆ ವಿಧಾನಸಭೆ ಮತ್ತೆ ಒಪ್ಪಿಗೆ ಕೊಟ್ಟಿದೆ. ವಾರ್ಷಿಕ ಒಂದು ಕೋಟಿ ರೂ.ಗಳ ಆದಾಯ ಮೀರುವ ಹಿಂದೂ ದೇಗುಲಗಳು ತಮ್ಮ ಈ ಆದಾಯದ ಶೇ.10 ರಷ್ಟನ್ನು ಸರ್ಕಾರಕ್ಕೆ ಕೊಡಬೇಕು. ಹತ್ತು ಲಕ್ಷ ರೂ.ಗಳಿಂದ ಒಂದು ಕೋಟಿ ರೂ. ಒಳಗಿನ ಆದಾಯ ಹೊಂದಿರುವ ದೇಗುಲಗಳು ಶೇ.5ರಷ್ಟನ್ನು ನೀಡಬೇಕು ಎಂಬುದು ತಿದ್ದುಪಡಿ ವಿಧೇಯಕದ ಮುಖ್ಯಾಂಶ. ಆದ್ದರಿಂದಲೇ ಇದಕ್ಕೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿಯಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ.
ಆದರೆ ರಾಜ್ಯಪಾಲರು ಇದಕ್ಕೆ ಅಂಕಿತ ಹಾಕುವರೇ, ಇಲ್ಲವೇ? ಎಂಬುದು ಈಗಿನ ಕುತೂಹಲ. ವಿಧಾನಸಭೆಯಲ್ಲಿ ಬಹುಮತವಿದ್ದ ಕಾರಣದಿಂದ ಆಡಳಿತ ಪಕ್ಷ ಸಹಜವಾಗಿ ಈ ತಿದ್ದುಪಡಿಗೆ ಅಂಗೀಕಾರ ಪಡೆದುಕೊಂಡಿತ್ತು. ಆದರೆ ಪರಿಷತ್ನಲ್ಲಿ ಬಹುಮತ ಹೊಂದಿರುವ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದಿಂದಾಗಿ ವಿಧೇಯಕ ಬಿದ್ದು ಹೋಗಿತ್ತು. ಹಾಗಾಗಿ, ಸಂಸದೀಯ ನಿಯಮಾವಳಿಗಳಂತೆ ಪುನಃ ತಿರಸ್ಕೃತ ವಿಧೇಯಕವು ವಿಧಾನಸಭೆಗೆ ಬಂದು ಅಂಗೀಕಾರಗೊಳ್ಳಬೇಕು.