ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಾರಿ ರಾಜ್ಯ ಬಜೆಟ್ ಮಂಡಿಸಿದ್ದು, ಪೊಲೀಸ್ ಇಲಾಖೆಯ ವಸತಿ ಗೃಹ, ಹೊಸ ಠಾಣೆಗಳ ನಿರ್ಮಾಣ ಮತ್ತು ಹೊಸ ಹೈ - ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಸೇರಿದಂತೆ ಕೆಲ ಕೊಡುಗೆಗಳನ್ನು ಘೋಷಿಸಿದ್ದಾರೆ.
- ಸಮಾಜದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸುವವರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡಗಳ ರಚನೆ ಹಾಗೂ ಒಳಾಡಳಿತ ಇಲಾಖೆಯಲ್ಲಿ ಒಂದು ವಿಶೇಷ ಕೋಶವನ್ನು ರಚಿಸಿ ಅದಕ್ಕೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ
- ಡೀಪ್ ಫೇಕ್ ಮತ್ತಿತರ ಸೈಬರ್ ಅಪರಾಧಗಳ ವಿರುದ್ಧ ತನಿಖೆಗೆ ಅನುಕೂಲವಾಗುವಂತೆ ಒಟ್ಟು 43 ಸಿಇಎಎನ್ ಠಾಣೆಗಳ ಉನ್ನತೀಕರಣ
- ಪೊಲೀಸ್ ಗೃಹ - 2025 ಯೋಜನೆಯಡಿ ಇದುವರೆಗೆ 800 ಕೋಟಿ ರೂ.ಗಳ ವೆಚ್ಚದಲ್ಲಿ 1,128 ವಸತಿ ಗೃಹಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗಿದೆ. 2,956 ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗೆ 200 ಕೋಟಿ ರೂಗಳ ಅನುದಾನ
- ಕಟ್ಟಡ ರಹಿತ ಠಾಣೆ ಮತ್ತು ಪೊಲೀಸ್ ಕಚೇರಿಗಳಿಗೆ 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ
- ವಿಧಿ ವಿಜ್ಞಾನ ಪ್ರಯೋಗಾಲಯಗಳ (FSL) ಮೊಬೈಲ್ ಫೋರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗಗಳನ್ನು ಬಲಪಡಿಸಲು 10 ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಉಪಕರಣಗಳನ್ನು ಮತ್ತು ತಂತ್ರಾಂಶ ಒದಗಿಸಲು ಯೋಜನೆ
- ರಾಜ್ಯದ ಎಲ್ಲ ಕಾರಾಗೃಹಗಳ ಸುಗಮ ಆಡಳಿತ ಮತ್ತು ಭದ್ರತೆಗಾಗಿ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಾಂಶ, ಬ್ಯಾಗೇಜ್ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣಗಳನ್ನು ಖರೀದಿ
- ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
- ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು The Karnataka Fire Force Act, 1964ರ ಅನ್ವಯ ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ Fire Cess ವಿಧಿಸಲಾಗುವುದು
- ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣ ನಿರ್ಮಾಣ