ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.
ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು
ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.