ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-2ರ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಏ.18ರವರೆಗೂ ಕಾಲಾವಕಾಶ - 2nd PUC Exam 2 - 2ND PUC EXAM 2
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.
Published : Apr 16, 2024, 10:03 PM IST
2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ದಿನಾಂಕವನ್ನು 18-04-2024ರ ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಹಾಗೂ ದಿನಾಂಕ 31-03-2024ಕ್ಕೆ 17 ವರ್ಷ ತುಂಬಿದ ಕಲಾ ಹಾಗೂ ವಾಣಿಜ್ಯ ವಿಭಾಗದ ಅರ್ಹ ವಿದ್ಯಾರ್ಥಿಗಳು 2024ರ ಪಿಯು ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ ಕಾಲೇಜಿನಲ್ಲಿ ನೊಂದಾಯಿಸಿಕೊಳ್ಳಲು ದಿನಾಂಕ 18-04-2024 ಕಡೆಯ ದಿನಾಂಕ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.