ಕರ್ನಾಟಕ

karnataka

ETV Bharat / state

ಕೇಂದ್ರ ಸಚಿವರಾಗಿ ಹೆಚ್​​ಡಿಕೆ ಸಹಿ ಮಾಡಿದ ಮೊದಲ ಕಡತಕ್ಕೆ ರಾಜ್ಯ ಸರ್ಕಾರ ತಡೆ - KIOCL File

ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಬಳಿಕ ಮೊದಲು ಸಹಿ ಮಾಡಿದ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ (ಕೆಐಒಸಿಎಲ್) ಕಡತಕ್ಕೆ ರಾಜ್ಯ ಸರ್ಕಾರ ತಡೆ ನೀಡಿದೆ.

By ETV Bharat Karnataka Team

Published : Jun 22, 2024, 8:30 PM IST

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಅಧಿಕಾರಿಗಳ ಜೊತೆ ಹೆಚ್​ಡಿ ಕುಮಾರಸ್ವಾಮಿ
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಅಧಿಕಾರಿಗಳ ಜೊತೆ ಹೆಚ್​ಡಿ ಕುಮಾರಸ್ವಾಮಿ (ETV Bharat)

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸಂಡೂರಿನ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗೆ ಸಂಬಂಧಿಸಿದ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ (ಕೆಐಒಸಿಎಲ್) ಕಡತಕ್ಕೆ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಸಹಿ ಹಾಕಿದ್ದರು. ಆದರೆ ಆ ಕಡತಕ್ಕೆ ಇದೀಗ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL)ಗೆ ಅರಣ್ಯ ತಿರುವಳಿ ಗುತ್ತಿಗೆ ಪತ್ರವನ್ನ ನೀಡದಂತೆ ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ಅವರು ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಲಿಖಿತ ಆದೇಶವನ್ನ ಸಚಿವರು ಹೊರಡಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಹಿಲ್ ಪ್ರದೇಶದಲ್ಲಿ 401.5761 ಹೆಕ್ಟೇ‌ರ್ ಅರಣ್ಯ ಭೂಮಿಯಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಗಾಗಿ ಕೆಐಒಸಿಎಲ್ ಬೆಂಗಳೂರು ಸಂಸ್ಥೆಯು ಅರಣ್ಯ ತಿರುವಳಿ ಪಡೆದಿದೆ. ಜೊತೆಗೆ ಅರಣ್ಯ ಇಲಾಖೆ ವತಿಯಿಂದ "ಅರಣ್ಯ ತಿರುವಳಿ ಗುತ್ತಿಗೆ ಪತ್ರ" ಸಹಿಯೂ ಸೇರಿದಂತೆ ಜಮೀನು ಹಸ್ತಾಂತರ ಬಾಕಿ ಇರುವುದನ್ನು ಗಮನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: 2006ರಲ್ಲಿ ಕೆಲವರ ಕುತಂತ್ರದಿಂದ ಅಧಿಕಾರ ಹಸ್ತಾಂತರ ಆಗಲಿಲ್ಲ, ಅದು ನನ್ನ ತಪ್ಪಲ್ಲ‌: ಹೆಚ್.ಡಿ.ಕುಮಾರಸ್ವಾಮಿ - HD Kumaraswamy

ಸದರಿ ಸಂಸ್ಥೆಯು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಗಣಿಗಾರಿಕೆಯ ಲೋಪದೋಷ/ಅರಣ್ಯ ಕಾಯ್ದೆ ಉಲ್ಲಘಂನೆಗಳಿಗಾಗಿ CECಯು ನೀಡಿರುವ ನಿರ್ದೇಶನಗಳನ್ನು ನಿಗದಿತ ಕಾಲಮಿತಿಯಲ್ಲಿ ಸಂಪೂರ್ಣವಾಗಿ ಜಾರಿ ಮಾಡಲು ವಿಫಲವಾಗಿರುವ ಬಗ್ಗೆ ದೂರುಗಳು ಕೇಳಿಬಂದಿರುತ್ತವೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಐಓಸಿಎಲ್ ಸಂಸ್ಥೆ CEC ನಿರ್ದೇಶನಗಳನ್ನು ಅನುಷ್ಠಾನಗೊಳಿಸುವವರೆಗೆ, ಸದರಿ ಸಂಸ್ಥೆಗೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಹಿಲ್ ಪ್ರದೇಶದಲ್ಲಿ ಗಣಿಗಾರಿಕೆಗಾಗಿ ನೀಡಲಾಗಿರುವ ಅರಣ್ಯ ತಿರುವಳಿಯನ್ನು ಅನುಷ್ಠಾನಗೊಳಿಸದಂತೆ ಅಂದರೆ "ಅರಣ್ಯ ತಿರುವಳಿ ಗುತ್ತಿಗೆ ಪತ್ರ" ಮಾಡಿಕೊಳ್ಳದಂತೆ ಹಾಗೂ ಅರಣ್ಯ ಭೂಮಿಯನ್ನು ಹಸ್ತಾಂತರಿಸದಂತೆ, ಸಂಬಂಧಿಸಿದವರಿಗೆ ಕೂಡಲೇ ಅಗತ್ಯ ಸೂಚಿಸಲು ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸಚಿವರು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ಹೆಚ್​ಎಂಟಿ ಕಂಪನಿಯ ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವರ ಸಭೆ : ಕಂಪನಿ ಪುನಶ್ಚೇತನಕ್ಕೆ ಕ್ರಮ, ವರದಿ ಕೇಳಿದ ಹೆಚ್​ಡಿಕೆ - Action for revival of HMT

ABOUT THE AUTHOR

...view details