ಕರ್ನಾಟಕ

karnataka

ETV Bharat / state

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸಚಿವ ಶಿವರಾಜ ತಂಗಡಗಿ ಆದೇಶ - Rangayan Director - RANGAYAN DIRECTOR

ಕರ್ನಾಟಕದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ರಂಗಾಯಣ
ರಂಗಾಯಣ (ETV Bharat)

By ETV Bharat Karnataka Team

Published : Aug 13, 2024, 7:00 AM IST

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೋಮವಾರ ಆದೇಶ ಹೊರಡಿಸಿದ್ದಾರೆ. ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ, ಕಲಬುರಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ, ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ಜೊತೆಗೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ.

ಇದನ್ನೂ ಓದಿ: ಜೀವಂತ ಇರುವಾಗಲೂ ಅಂಗಾಂಗ ದಾನ ಮಾಡಬಹುದು: ಡಾ.ಮಯೂರ್ ವಿ.ಪ್ರಭು - World Organ Donation Day

ABOUT THE AUTHOR

...view details