ಕರ್ನಾಟಕ

karnataka

ETV Bharat / state

ಪಿಡಿಒ, ಗ್ರಾಪಂ ಕಾರ್ಯದರ್ಶಿ ಸೇರಿ ಹಲವು ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರದ ಆದೇಶ - Transfer Through Counseling - TRANSFER THROUGH COUNSELING

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೆ ಒಳಪಡುವ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸೇರಿ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮೂಲಕ ಮಾಡಲು ನಿರ್ಧರಿಸಲಾಗಿದೆ.

ವಿಧಾನಸೌಧ
ವಿಧಾನಸೌಧ (ETV Bharat)

By ETV Bharat Karnataka Team

Published : Jun 27, 2024, 7:41 AM IST

Updated : Jun 27, 2024, 11:21 AM IST

ಬೆಂಗಳೂರು: ಭ್ರಷ್ಟಾಚಾರ ತಡೆಯಲು ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25ನೇ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೆ ಒಳಪಡುವ ಅನೇಕ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮೂಲಕ ಮಾಡಲು ನಿರ್ಧರಿಸಲಾಗಿದೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1 ಮತ್ತು ಗ್ರೇಡ್-2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮೂಲಕ ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಆದೇಶ ನೀಡಿದೆ.

'ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ ಮತ್ತು ಭ್ರಷ್ಟಾಚಾರ ತಡೆಯಲು ಸಿಬ್ಬಂದಿ ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಇದರ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:ರಾಜ್ಯ ಕಟ್ಟಡ, ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ವೆಚ್ಚದ ಮೂಲಗಳ ವಿವರ ಸಲ್ಲಿಕೆಗೆ ಹೈಕೋರ್ಟ್ ಸೂಚನೆ

Last Updated : Jun 27, 2024, 11:21 AM IST

ABOUT THE AUTHOR

...view details