ಕರ್ನಾಟಕ

karnataka

ETV Bharat / state

ಬಸ್​ ಸ್ಟ್ಯಾಂಡ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಶೀಘ್ರದಲ್ಲೇ 'ನಮ್ಮ ಕ್ಲಿನಿಕ್' ಪ್ರಾರಂಭ - Namma Clinics - NAMMA CLINICS

ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ 'ನಮ್ಮ ಕ್ಲಿನಿಕ್'​​ಗಳನ್ನು ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳೊಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು.

ಸಚಿವ ದಿನೇಶ್ ಗುಂಡೂರಾವ್ ಸಭೆ
ಸಚಿವ ದಿನೇಶ್ ಗುಂಡೂರಾವ್ ಸಭೆ (ETV Bharat)

By ETV Bharat Karnataka Team

Published : Jun 13, 2024, 9:20 PM IST

ಬೆಂಗಳೂರು: ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 'ನಮ್ಮ ಕ್ಲಿನಿಕ್'ಗಳನ್ನು ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ವಿಕಾಸಸೌಧದಲ್ಲಿ ಇಂದು ಸಂಜೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ನೂತನ ನಮ್ಮ ಕ್ಲಿನಿಕ್​​ಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್​​ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್​​ಗಳನ್ನು ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್​​ಗಳನ್ನು ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳೊಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್, ಎನ್.ಎಚ್.ಎಮ್ ಎಂ.ಡಿ.ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚಿಸಿದರು.

15ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳು ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಸಚಿವರು ಸೂಚಿಸಿದರು.

ಇದನ್ನೂ ಓದಿ: ಇದು 'ರಕ್ತದಾನಿಗಳ ಗ್ರಾಮ'ವೆಂದೇ ಪ್ರಸಿದ್ಧಿ; ಇಲ್ಲಿನ ಪ್ರತಿ ಮನೆಯಲ್ಲೂ ಇದ್ದಾರೆ ದಾನಿಗಳು - WORLD BLOOD DONOR DAY 2024

ABOUT THE AUTHOR

...view details