ಬೆಂಗಳೂರು:ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದು, ಪರಿಶಿಷ್ಟ ಜಾತಿಗೆ ಮೀಸಲಾದ ಚಿತ್ರದುರ್ಗ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ದಾರಕೇಶ್ವರಯ್ಯ ಪ್ರಯತ್ನಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. ದಾಸರಹಳ್ಳಿಯ ಎಂ.ಚಂದ್ರ ಬಿನ್ ಮುನಿಯಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅವಧಿ ವಿಸ್ತರಿಸಿತು.
ವಿಚಾರಣೆ ವೇಳೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳ ಪರ ವಕೀಲರು ವಾದ ಮಂಡಿಸಿ, ಪ್ರಕರಣದ ಪ್ರತಿವಾದಿಗಳು ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್ರಿಂದ ಪಡೆದ ಬೇಡ ಜಂಗಮ ಪ್ರಮಾಣಪತ್ರ ರದ್ದಾಗಿತ್ತು. ಇದೀಗ ಬೆಂಗಳೂರು ದಕ್ಷಿಣ ತಹಶೀಲ್ದಾರ್ರಿಂದ ಇದೇ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಪರಿಶಿಷ್ಟ ಜಾತಿಯವರಿಗೆ ಅನ್ಯಾಯ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.