ಕರ್ನಾಟಕ

karnataka

ETV Bharat / state

ಫೆ.26ರಿಂದ 3 ದಿನ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್‌ಪೋ: ಹೆಚ್.ಕೆ.ಪಾಟೀಲ್ - TRAVEL EXPO 2025

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಫೆ.26ರಿಂದ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್‌ಪೋ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಹೆಚ್​.ಕೆ.ಪಾಟೀಲ್ ತಿಳಿಸಿದರು.

TRAVEL EXPO 2025
ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮಗೋಷ್ಟಿ (ETV Bharat)

By ETV Bharat Karnataka Team

Published : Feb 25, 2025, 3:35 PM IST

ಹುಬ್ಬಳ್ಳಿ:ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದಿಂದ ಫೆಬ್ರವರಿ 26ರಿಂದ ಫೆಬ್ರವರಿ 28ರವರೆಗೆ ಮೂರು ದಿನಗಳ ಕಾಲ 'ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್‌ಪೋ (KITE) - 2025'ನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, "ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಂ ಸೊಸೈಟಿಯ ಸಹಯೋಗದಲ್ಲಿ ನಡೆಯಲಿರುವ ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಉದ್ಘಾಟಿಸಲಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವೂ ಪಾಲ್ಗೊಳ್ಳಲಿದೆ" ಎಂದರು.

ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮಗೋಷ್ಟಿ (ETV Bharat)

"ಫೆಬ್ರವರಿ 27 ಮತ್ತು 28ರಂದು ತುಮಕೂರು ರಸ್ತೆಯ ಮಾದಾವರದಲ್ಲಿನ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್​ನಲ್ಲಿ ಸಮಾವೇಶ ನಡೆಯಲಿದೆ‌. ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ" ಎಂದು ತಿಳಿಸಿದರು.

"ಪ್ರತಿವರ್ಷ ರಾಜ್ಯಕ್ಕೆ 1 ಕೋಟಿ 25 ಲಕ್ಷಕ್ಕೂ ಅಧಿಕ ಪ್ರವಾಸಿಗಳು ಭೇಟಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿವೆ. ಇದರಲ್ಲಿ 800ಕ್ಕೂ ಹೆಚ್ಚು ಸ್ಮಾರಕಗಳ ರಕ್ಷಣೆ ಮಾಡಲಾಗಿದೆ. ಇವುಗಳನ್ನು ಬೆಳಕಿಗೆ ತರುವ ಕೆಲಸ ಮಾಡಲಾಗುವುದು. ಈ ಮೂಲಕ ಮುಂದಿನ ಪೀಳಿಗೆಗೆ ಇವುಗಳ ಮಹತ್ವ ತಿಳಿಸಲಾಗುವುದು" ಎಂದರು.

"ಸಮಾವೇಶದಲ್ಲಿ ಕಲೆ, ಸಂಸ್ಕೃತಿ, ಪರಂಪರೆ, ಇತಿಹಾಸ, ಕರಕುಶಲ ಉತ್ಪನ್ನಗಳು, ಪಾಕ ಪದ್ದತಿ, ನೃತ್ಯ ಪ್ರಕಾರಗಳು, ಜೀವನ ಶೈಲಿ, ಅತಿಥಿ ಸತ್ಕಾರಗಳು ಪ್ರದರ್ಶನಗೊಳ್ಳಲಿವೆ. ಪ್ರವಾಸೋದ್ಯಮದ ಸಮಗ್ರ ಬೆಳವಣಿಗೆ ಇದರ ಮುಖ್ಯ ಉದ್ದೇಶ" ಎಂದು ತಿಳಿಸಿದರು.

ಬೆಳಗಾವಿ ಘಟನೆಗೆ ಪ್ರತಿಕ್ರಿಯೆ: "ಬೆಳಗಾವಿ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಮುಂದೆ ಈ ರೀತಿ ಆಗದಂತೆ ಜಾಗೃತಿ ವಹಿಸಲಾಗುವುದು. ಕೆಲವೊಂದು ವಿಕೃತ ಮನಸ್ಥಿತಿಯಿಂದ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ಆಗಿದೆ. ಕಾನೂನಾತ್ಮಕವಾಗಿ ಸಮಸ್ಯೆ ಬಗೆಹರಿಸಲಾಗುವುದು. ಕನ್ನಡ-ಮರಾಠಿ ಸಾಮರಸ್ಯ ಕೆಡಿಸುವವರನ್ನು ಮಟ್ಟ ಹಾಕಲಾಗುವುದು. ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಕ್ರಮ ಜರುಗಿಸಲಾಗುವುದು" ಎಂದರು.

"ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಬದಲಾವಣೆ, ಮುಂದಿನ ಚುನಾವಣೆ ಯಾರ ನೇತೃತ್ವದಲ್ಲಿ ಎಂಬ ಬಗ್ಗೆ ಏನೂ ಮಾತನಾಡಬಾರದು ಎಂದು ನಮ್ಮ ಮುಖ್ಯಸ್ಥರಾದ ಮಲ್ಲಿಕಾರ್ಜುನ ‌ಖರ್ಗೆ ಹೇಳಿದ್ದಾರೆ. ನಾವು ಕಾಂಗ್ರೆಸ್​ನ ಶಿಸ್ತಿನ ಸಿಪಾಯಿಗಳು" ಎಂದು ಹೇಳಿದರು.

ಇದನ್ನೂ ಓದಿ:ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್ : ನಾವು ಕನ್ನಡಾಭಿಮಾನಿಗಳು ಎಂದ ಬಾಲಕಿ ಪೋಷಕರು; ಸಿಪಿಐ ವರ್ಗಾವಣೆ - BELAGAVI CONDUCTOR CASE

ABOUT THE AUTHOR

...view details