ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಗದು, ಮದ್ಯ, ಉಡುಗೊರೆ ಸೇರಿದಂತೆ ಕೋಟ್ಯಂತರ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. | Read More
ಕರ್ನಾಟಕ ಸುದ್ದಿ - Live Updates Tue Nov 12 2024: Karnataka Today News
Published : Nov 12, 2024, 8:10 AM IST
|Updated : Nov 12, 2024, 8:42 PM IST
ಉಪ ಚುನಾವಣೆ: ಚನ್ನಪಟ್ಟಣದಲ್ಲಿ ಅತಿ ಹೆಚ್ಚು ಅಕ್ರಮ - 30.25 ಕೋಟಿ ಮದ್ಯ, ನಗದು, ಉಡುಗೊರೆ ವಶ
ನ್ಯಾಯಾಧೀಶರ ಕುರಿತು ಅವಹೇಳನಕಾರಿ ಪೋಸ್ಟ್ ವಿಚಾರ; ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ
ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಧೀಶರ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ರಾಮನಗರದ ವಕೀಲರೊಬ್ಬರ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. | Read More
ವಿಚ್ಛೇದನದ ಬಳಿಕವೂ ಪುತ್ರಿಯರ ಆರೈಕೆ, ಶಿಕ್ಷಣ ತಂದೆಯ ಕಾನೂನುಬದ್ಧ ಜವಾಬ್ದಾರಿ: ಹೈಕೋರ್ಟ್
ಹೆಣ್ಣು ಮಕ್ಕಳ ಆರೈಕೆ ಮಾಡುವುದು ಮತ್ತು ಅವರಿಗೆ ಶಿಕ್ಷಣ ಕೊಡಿಸುವುದು ತಂದೆಯ ಜವಾಬ್ದಾರಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. | Read More
ಬೆಂಗಳೂರು: ಜಿಕೆವಿಕೆಯಲ್ಲಿ ನ.14 ರಿಂದ 4 ದಿನಗಳ ಕಾಲ ಕೃಷಿಮೇಳ
ಬೆಂಗಳೂರಿನ ಜಿಕೆವಿಕೆಯಲ್ಲಿ ನವೆಂಬರ್ 14 ರಿಂದ 17ರ ವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ. | Read More
ನಬಾರ್ಡ್ ನಿರ್ಧಾರದಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆ : ಸಚಿವ ಶಿವಾನಂದ ಪಾಟೀಲ್
ಸಚಿವ ಶಿವಾನಂದ ಪಾಟೀಲ್ ಅವರು ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ್ತದ ಕುರಿತು ಮಾತನಾಡಿದ್ದಾರೆ. ನಬಾರ್ಡ್ ನಿರ್ಧಾರದಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಲಿದೆ ಎಂದಿದ್ದಾರೆ. | Read More
ಪತ್ನಿ, ಮಗು ಕೊಂದು ವ್ಯಕ್ತಿ ಆತ್ಮಹತ್ಯೆ ಪ್ರಕರಣ: ತಾಯಿ, ಅಕ್ಕ ಬಂಧನ
ಪತ್ನಿ ಹಾಗೂ ಮಗುವನ್ನು ಕೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಹಾಗೂ ಅಕ್ಕನನ್ನ ಪೊಲೀಸರು ಬಂಧಿಸಿದ್ದಾರೆ. | Read More
ಪಿಲಿಕುಳದಲ್ಲಿ ನ.17 ರಂದು ಕಂಬಳ ಆಯೋಜನೆ ನಿರ್ಧಾರವಾಗಿಲ್ಲ: ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರ್ಕಾರ
ಪಿಲಿಕುಳದಲ್ಲಿ ನವೆಂಬರ್ 17 ರಂದು ಕಂಬಳ ಸ್ಪರ್ಧೆ ಆಯೋಜಿಸುವ ಕುರಿತು ಈವರೆಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ. | Read More
ಹೆಚ್ಡಿಕೆ - ಜಮೀರ್ ಗಳಸ್ಯ ಕಂಠಸ್ಯ, ಹೆಚ್ಚು ಚರ್ಚೆ ಅಗತ್ಯವಿಲ್ಲ: ಸಚಿವ ಜಿ.ಪರಮೇಶ್ವರ್
ಜಮೀರ್ ಅಹ್ಮದ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಒಳ್ಳೆಯ ಸ್ನೇಹಿತರು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. | Read More
ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಶಿವಮೊಗ್ಗ ವಾಹನ ಮಾಲೀಕರಿಂದ ವಿರೋಧ
ಕಡ್ಡಾಯವಾಗಿ ಜಿಪಿಎಸ್, ಪ್ಯಾನಿಕ್ ಬಟನ್ ಮತ್ತು ರೆಟ್ರೋ ರಿಫ್ಲೆಕ್ಟಿವ್ ಟೇಪ್ ಅಳವಡಿಕೆಗೆ ಶಿವಮೊಗ್ಗ ಪ್ರವಾಸಿ ವಾಹನಗಳ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ. | Read More
ಆಹಾರ ಪದ್ಧತಿ, ಒತ್ತಡ ಮುಕ್ತ ಜೀವನ ಶೈಲಿಯಿಂದ ಶುಗರ್ ನಿಯಂತ್ರಣ ಸಾಧ್ಯ: ವೈದ್ಯರ ಅಭಿಮತ
ಆಹಾರ ಪದ್ಧತಿ, ಒತ್ತಡ ಮುಕ್ತ ಜೀವನ ಶೈಲಿಯಿಂದ ಶುಗರ್ ನಿಯಂತ್ರಣ ಸಾಧ್ಯ ಎಂಬುದು ವೈದ್ಯರು ಸಲಹೆಯಾಗಿದೆ. ಈ ಕುರಿತು ಈಟಿವಿ ಭಾರತ ಮೈಸೂರು ಪ್ರತಿನಿಧಿ ಮಹೇಶ್ ಅವರ ವಿಶೇಷ ವರದಿ ಇಲ್ಲಿದೆ. | Read More
ಕುರುಬರೆಲ್ಲಾ ಕಾನೂನು ಓದೋಕೆ ಆಗುತ್ತಾ ಅಂತಿದ್ರು, ನಾನು ಹಠ ತೊಟ್ಟು ಲಾಯರ್ ಆದೆ: ಸಿಎಂ ಸಿದ್ದರಾಮಯ್ಯ
ನಮ್ಮಪ್ಪ ಚನ್ನಪ್ಪಯ್ಯ ಅವರು ಮೇಲ್ವರ್ಗದವರ ಮಾತು ಕೇಳಿ, ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎನ್ನುತ್ತಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ ಎಂದು ಸಿಎಂ ತಿಳಿಸಿದರು. | Read More
ಅಂತಾರಾಜ್ಯ ಮನೆಗಳ್ಳನ ಬಂಧನ: 25 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ
ಬೆಂಗಳೂರಲ್ಲಿ ಅಂತಾರಾಜ್ಯ ಮನೆಗಳ್ಳ ಹಾಗೂ ವಿದೇಶಿ ಪ್ರಜೆಗಳ ಮೇಲೆ ಹಲ್ಲೆ ಮಾಡಿ ದೋಚಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. | Read More
ಯಾಸೀರ್ ಖಾನ್ ಪಠಾಣ್ ರೌಡಿಶೀಟರ್ ಎಂದು ಬೊಮ್ಮಾಯಿ ಸುಳ್ಳು ಆರೋಪ ಮಾಡುತ್ತಿದ್ದಾರೆ : ಶಿವಾನಂದ ಪಾಟೀಲ್
ಸಚಿವ ಶಿವಾನಂದ ಪಾಟೀಲ್ ಅವರು ಸಂಸದ ಬಸವರಾಜ ಬೊಮ್ಮಾಯಿ ಕುರಿತು ಮಾತನಾಡಿದ್ದಾರೆ. ಯಾಸೀರ್ ಖಾನ್ ಪಠಾಣ್ ಒಬ್ಬ ರೌಡಿಶೀಟರ್ ಎಂದು ಬೊಮ್ಮಾಯಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. | Read More
ಅಂಬೇಡ್ಕರ್ ಕುರಿತ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ ಅಜ್ಜಂಪೀರ್ ಖಾದ್ರಿ
ಬಾಬಾಸಾಹೇಬ ಅಂಬೇಡ್ಕರ್ ಕುರಿತ ಹೇಳಿಕೆ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ಕ್ಷಮೆಯಾಚಿಸಿ, ಹೇಳಿಕೆ ಹಿಂಪಡೆದಿದ್ದಾರೆ. | Read More
ಹೆಚ್‌ಡಿಕೆಗೆ 'ಕರಿಯಣ್ಣ' ಎಂದು ಸಂಬೋಧನೆ: ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ಮಾಧ್ಯಮಗಳ ಮುಂದೆ ಕ್ಷಮೆಯಾಚಿಸಿದರು. | Read More
ಮಾಲೀಕನ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ, ನಗದು ದೋಚಿದ್ದ ಪ್ರಕರಣ ; ನೇಪಾಳ ಮೂಲದ ಮೂವರ ಬಂಧನ
ಮಾಲೀಕನ ಪ್ರಜ್ಞೆ ತಪ್ಪಿಸಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. | Read More
ಮಂಡ್ಯ: ದೇಗುಲದ ಗೇಟ್ ಮೈಮೇಲೆ ಬಿದ್ದು ಬಾಲಕ ಸಾವು
ದೇವಸ್ಥಾನ ಹಾಗೂ ಮುಜರಾಯಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಬಾಲಕನ ಪೋಷಕರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. | Read More
ಹಾವೇರಿಯಲ್ಲಿ ಲೋಕಾಯುಕ್ತ ದಾಳಿ: ಹಣ ಗಂಟು ಕಟ್ಟಿ ಹೊರಗೆಸೆದ ಎಇ ಕಾಶಿನಾಥ್ ಭಜಂತ್ರಿ
ದಾಳಿ ವೇಳೆ ಎಇ ಕಾಶಿನಾಥ್ ಭಜಂತ್ರಿ 9 ಲಕ್ಷ ರೂಪಾಯಿ ನಗದು ಹಣವನ್ನು ತಮ್ಮ ಶೌಚಾಲಯದ ಕಿಟಕಿಯಿಂದ ಹೊರಗೆ ಎಸೆದಿರುವುದನ್ನು ಲೋಕಾಯುಕ್ತ ಎಸ್ಪಿ ಕೌಲಾಪುರೆ ಖಚಿತಪಡಿಸಿದ್ದಾರೆ. | Read More
ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ವಕ್ಫ್ ವಿಚಾರ ಪ್ರಸ್ತಾಪ: ಶಾಸಕ ಯತ್ನಾಳ್ಗೆ ಸಾರ್ವಜನಿಕರ ತರಾಟೆ
ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರನ್ನು ಸ್ಥಳದಲ್ಲಿದ್ದ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. | Read More
ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಿಎಂ ಕಚೇರಿ
ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಿದ್ದರಾಮಯ್ಯ ಕಚೇರಿ ಸ್ಪಷ್ಟಪಡಿಸಿದೆ. | Read More
ಮೊದಲ ಬಾರಿಗೆ ಮುಡಾ ಕಚೇರಿಗೆ ಭೇಟಿ ನೀಡಿದ ನಿವೃತ್ತ ನ್ಯಾ.ದೇಸಾಯಿ
ಈಗಾಗಲೇ ಮುಡಾ ಪ್ರಕರಣವನ್ನು ಲೋಕಾಯುಕ್ತ ಹಾಗೂ ಇ.ಡಿ. ತನಿಖೆ ನಡೆಸುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು ಮುಡಾ ಕಚೇರಿಗೆ ಭೇಟಿ ನೀಡಿದರು. | Read More
ಮನೆ ಮಾರಿದ ಹಣಕ್ಕಾಗಿ ತಾಯಿಯ ಹತ್ಯೆ: ಆರೋಪಿ ಪುತ್ರ ಸಹಿತ ಇಬ್ಬರ ಬಂಧನ
ಮನೆ ಮಾರಿದ ದುಡ್ಡಿಗಾಗಿ ಪೀಡಿಸುತ್ತಿದ್ದ ಹಿರಿಯ ಮಗ ಶುಕ್ರವಾರ ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಕೊಲೆ ಮಾಡಿದ್ದ. | Read More
ಬೆಂಗಳೂರಲ್ಲಿ ಬಾಂಗ್ಲಾದೇಶ ಮೂಲದ ಅಲ್-ಖೈದಾ ಬೆಂಬಲಿಗರ ನೆಲೆಗಳ ಮೇಲೆ ಎನ್ಐಎ ದಾಳಿ
ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರಾ ಮತ್ತು ಅಸ್ಸೋಂ ರಾಜ್ಯಗಳ 9 ಸ್ಥಳಗಳಲ್ಲಿ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. | Read More
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಟ್ಯಾಕ್ಸಿಗಾಗಿ ಕಾದು ಕಾದು ಸುಸ್ತು: ಅವ್ಯವಸ್ಥೆ ಬಗ್ಗೆ ಪ್ರಯಾಣಿಕನ ಅಕ್ರೋಶ
ಪ್ರಯಾಣಿಕರೊಬ್ಬರು ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ಇದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. | Read More
ಮೈಸೂರು: ಸ್ನೇಹಮಯಿ ಕೃಷ್ಣರನ್ನು ಬಂಧಿಸುವಂತೆ ಜಿಲ್ಲಾ ಕಾಂಗ್ರೆಸ್ ದೂರು
ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸುವಂತೆ ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ. | Read More
ಮತ್ತೆ ಮಳೆ ಮುನ್ಸೂಚನೆ: ರಾಜ್ಯದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ನವೆಂಬರ್ 14ರಿಂದ ಮಳೆಯಾಗುವ ಸಾಧ್ಯತೆ ಇದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. | Read More
ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ, ದಾಖಲೆಗಳ ಪರಿಶೀಲನೆ
ದಾವಣಗೆರೆ, ಧಾರವಾಡ, ಹಾವೇರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. | Read More
ಮನೆ ಬಾಡಿಗೆದಾರನಿಂದ ಸ್ಕೂಟರ್ ಕಳವು: ಕೃತ್ಯ ಸಿಸಿಟಿವಿಯಲ್ಲಿ ಸೆರೆ
ತಾನು ಬಾಡಿಗೆಗಿದ್ದ ಮನೆಯ ಸ್ಕೂಟರ್ ಕದ್ದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಕಳ್ಳತನದ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. | Read More
ಆರೋಪ ಮಾಡುವಾಗ ಫ್ಯಾಕ್ಟ್ ಚೆಕ್ ಮಾಡಿ, ಇಲ್ಲದಿದ್ದರೆ ಹಾಸ್ಯಾಸ್ಪದವಾಗುವಿರಿ: ಪ್ರಿಯಾಂಕ್ ಖರ್ಗೆ
ಅಮಾನತುಗೊಂಡ ಭ್ರಷ್ಟಾಚಾರಿಗಳು ನಡೆಸಿರುವ ಭ್ರಷ್ಟಾಚಾರದಲ್ಲಿ ನಿಮ್ಮ ಪಾಲೆಷ್ಟು ಪ್ರಿಯಾಂಕ್ ಖರ್ಗೆ ಅವರೇ? ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದರು. | Read More
ಬಟ್ಟೆ ಖರೀದಿಸಿ ಹಣ ಪಾವತಿಸಿರುವುದಾಗಿ ನಕಲಿ ಫೋಟೊ ತೋರಿಸಿ ವಂಚನೆ, ಯುವತಿ ಬಂಧನ
ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಬಟ್ಟೆ ಅಂಗಡಿಯವರಿಗೆ ಹಣ ಪಾವತಿಯಾಗಿದೆ ಎಂದು ಸುಳ್ಳು ಫೋಟೋ ತೋರಿಸಿ ವಂಚಿಸಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. | Read More
ಬೆಂಗಳೂರು: ನವೆಂಬರ್ 15ರಿಂದ ರೈತಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ
ನ.15ರಿಂದ ರೈತಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ ನಡೆಸಲಾಗುತ್ತಿದೆ ಎಂದು ಬಿ.ಕೆ.ಶಿವರಾಂ ಹೇಳಿದರು. | Read More
ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು: ಹಿಂಬದಿ ಸವಾರ ಗಂಭೀರ
ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಚಿಕ್ಕಬಾಣವಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. | Read More
ಕಾರವಾರ ಜೈಲಿನಲ್ಲಿ ಸೊಳ್ಳೆ ಕಾಟ: ಕಿಟಕಿಗೆ ಮೆಶ್, ಗೋಡೆಗಳಿಗೆ ಬಣ್ಣ ಬಳಿಯಲು ಜೈಲಾಧಿಕಾರಿಗಳಿಗೆ ಸೂಚನೆ
ಕಾರವಾರದ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ರಾಜ್ಯ ಮಾನವ ಹಕ್ಕು ಆಯೋಗದ ಸದಸ್ಯರು, ಜೈಲಿನಲ್ಲಿ ಸೊಳ್ಳೆ ಕಾಟ ಹೆಚ್ಚಾಗಿದೆ. ಕಿಟಕಿಗೆ ಮೆಶ್, ಗೋಡೆಗಳಿಗೆ ಬಣ್ಣ ಬಳಿಯುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದರು. | Read More
ರೇವ್ ಪಾರ್ಟಿ ಕೇಸ್: ಸಿಸಿಬಿ ಅಧಿಕಾರಿಗಳ ವಿರುದ್ಧ ತನಿಖೆಗೆ ಮಾನವ ಹಕ್ಕುಗಳ ಆಯೋಗ ಸೂಚನೆ
ಬೆಂಗಳೂರಿನ ಹೆಬ್ಬಗೋಡಿಯಲ್ಲಿ ಇತ್ತೀಚೆಗೆ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಪೊಲೀಸ್ ಕಮಿಷನರ್ಗೆ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ. | Read More
ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತೀರ್ಪು ಇಂದು
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ತೀರ್ಪು ಇಂದು ಮಧ್ಯಾಹ್ನ 2.30ಕ್ಕೆ ಹೊರಬೀಳಲಿದೆ. | Read More
ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. | Read More