ಬೆಂಗಳೂರು: ಮುಂಗಾರು ಮಾರುತಗಳು ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಇಂದೂ ಕೂಡ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿದೆ.
ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗದಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಇರಲಿದೆ. ಉಳಿದಂತೆ ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು, ಕಲಬುರಗಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ ಚದುರಿದ ಗಾಳಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಧಾರಾಕಾರ ಮಳೆಯ ಸಾಧ್ಯತೆ ಇದೆ. ಬಾಗಲಕೋಟೆ, ಕೊಪ್ಪಳ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಬೀದರ್ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ: ಬಾದಾಮಿಯಲ್ಲಿ ಧುಮ್ಮುಕ್ಕುತ್ತಿದೆ ಅಕ್ಕ ತಂಗಿಯರ ಫಾಲ್ಸ್ - WATCH VIDEO - Akka Thangi Falls