ಕರ್ನಾಟಕ

karnataka

ETV Bharat / state

ಮಂಗಳೂರು, ಭಾಲ್ಕಿಯಲ್ಲಿ ಅತೀ ಹೆಚ್ಚು ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್ - Karnataka Rain Forecast

ರಾಜ್ಯಾದ್ಯಂತ ಮುಂಗಾರು ಚುರುಕು ಪಡೆದಿದೆ. ಮುಂದಿನ 24 ಗಂಟೆಗಳ ಕಾಲ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

RAIN
ಮಳೆ (Etv Bharat)

By ETV Bharat Karnataka Team

Published : Jun 23, 2024, 8:57 PM IST

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗು ಸಹಿತ ಚದುರಿದ ಭಾರೀ ಮಳೆಯು ಸಂಭವಿಸುವ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಬೀರುಗಾಳಿ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:ಅಸ್ಸೋಂನಲ್ಲಿ ಭೀಕರ ಪ್ರವಾಹ: ಭೂಕುಸಿತಕ್ಕೆ ಒಂದೇ ಕುಟುಂಬದ ಐವರು ಸಾವು, ಸಂಕಷ್ಟದಲ್ಲಿ 1.61 ಲಕ್ಷ ಜನರು - landslide in Assam

ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮತ್ತು ಒಳ ಕರ್ನಾಟಕದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

ಬೆಂಗಳೂರಲ್ಲಿ ಸಾಧಾರಣ ಮಳೆ:ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಜೊತೆಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.

ಎಲ್ಲಿ ಅತೀ ಹೆಚ್ಚು ಮಳೆ?:ಶನಿವಾರ ದಕ್ಷಿಣ ಕನ್ನಡ ಜಿಲ್ಲೆ ಪಣಂಬೂರು, ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಅತೀ ಹೆಚ್ಚು ಅಂದರೆ 5 ಸೆ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ 4, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ ಮಳೆ ಸುರಿದಿದೆ.

ಮೀನುಗಾರರರಿಗೆ ಎಚ್ಚರಿಕೆ:45 ರಿಂದ 55 ಕಿ.ಮೀ. ವೇಗದಲ್ಲಿ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ತೀವ್ರ ಗಾಳಿ ಬೀಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ನಿನ್ನೆ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪಕ್ಕದ ಜಿಲ್ಲೆಗಳಲ್ಲಿ ಇಂದಿನಿಂದ 25 ಜೂನ್ 2024 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಲವಾದ ಗಾಳಿ ಮತ್ತು ಭೂಕುಸಿತದ ಸಾಧ್ಯತೆಗಳಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ರಾಜವೇಲ್ ಮಾಣಿಕ್ಕಂ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ; ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? - WATER LEVEL IN DAMS

ABOUT THE AUTHOR

...view details