ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಇನ್ನೂ ಏಳು ದಿನಗಳ ಕಾಲ ಮುಂದುವರಿಯಲಿದೆ ಪೂರ್ವ ಮುಂಗಾರು ಮಳೆ: ಎಲ್ಲೆಲ್ಲಿ ಆಗಲಿದೆ ರೇನ್​! - Karnataka Rain Forecast - KARNATAKA RAIN FORECAST

ರಾಜ್ಯದಲ್ಲಿ ಮುಂದಿನ 7 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain
Karnataka Rain (ETV Bharat)

By ETV Bharat Karnataka Team

Published : May 27, 2024, 7:08 PM IST

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಪೂರ್ವ ಮುಂಗಾರು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆ:ಮುಂದಿನ ಏಳು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯೊಂದಿಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

ಉಳಿದಂತೆ ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಂಭವವಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂನ್ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ:ಮುಂದಿನ 5 ದಿನಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್‌ ಮತ್ತು ಕೊಮೊರಿನ್ ಪ್ರದೇಶದಲ್ಲಿ ನೈರುತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲಿದೆ. ಕೇರಳಕ್ಕೆ ನಾಳೆ ಅಥವಾ ನಾಡಿದ್ದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಜೂನ್ 7 ರಂದು ರಾಜ್ಯದ ಕರಾವಳಿಗೆ ಮುಂಗಾರು ಮಾರುತಗಳು ಪ್ರವೇಶಸಲಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ರಾಜವೇಲ್ ಮಾಣಿಕ್ಕಂ ಹೇಳಿದ್ದಾರೆ.

ಈಗಾಗಲೇ ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗಿ ಬೆಳೆಹಾನಿ ಉಂಟಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಕಬ್ಬು ಕಟಾವು‌ ಮಾಡುವಾಗ ಚಿರತೆ ಪ್ರತ್ಯಕ್ಷ, ದಿಕ್ಕಾಪಾಲಾಗಿ ಓಡಿದ ಜನ - leopard in sugarcane field

ABOUT THE AUTHOR

...view details