ಬೆಂಗಳೂರು:ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಜೊತೆಗೆ ಪೂರಕ ದಾಖಲೆಗಳೊಂದಿಗೆ ವಿದ್ಯಾರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ದಿನಾಂಕ 1/3/2024 ರಿಂದ 18/3/2024 ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ (Scheme of Evaluation) ಗಳನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ 20/3/2024 ರಿಂದ ದಿನಾಂಕ 22/3/2024 ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರುಗಳು ಈ ಕೆಳಗಿನ ಅಂಶಗಳಿಗೆ ಮಾತ್ರ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ ಎಂದು ಮಂಡಳಿ ತಿಳಿಸಿದೆ.