ಬೆಂಗಳೂರು: ವಿದ್ಯಾರ್ಥಿಗಳು ಬಹಳ ಕಾತರದಿಂದ ನಿರೀಕ್ಷಿಸುತ್ತಿದ್ದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರೀಕ್ಷೆಯ ದಿನಾಂಕಗಳನ್ನು ಇಂದು ಘೋಷಣೆ ಮಾಡಿದೆ.
ಪರೀಕ್ಷೆ - 1ರ ವೇಳಾಪಟ್ಟಿ ಇದಾಗಿದ್ದು, 10ನೇ ತರಗತಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭಗೊಂಡು ಏಪ್ರಿಲ್ 4 ಕ್ಕೆ ಅಂತ್ಯಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ ಪ್ರಾರಂಭಗೊಂಡು ಮಾರ್ಚ್ 20 ರಂದು ಅಂತ್ಯಗೊಳ್ಳಲಿದೆ. 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್ನಲ್ಲಿ ಸಹ ಪ್ರಕಟಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ - 1 ರ ವೇಳಾಪಟ್ಟಿ ಹೀಗಿದೆ.
ಮಾರ್ಚ್ 21 - ಪ್ರಥಮ ಭಾಷೆ (ಕನ್ನಡ, ಸಂಸ್ಕೃತ, ಹಿಂದಿ, ಉರ್ದು, ಇತ್ಯಾದಿ)
ಮಾರ್ಚ್ 24 - ಗಣಿತ
ಮಾರ್ಚ್ 26 - ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಮಾರ್ಚ್ 29 - ಸಮಾಜ ವಿಜ್ಞಾನ
ಏಪ್ರಿಲ್ 2 - ವಿಜ್ಞಾನ
ಏಪ್ರಿಲ್ 4 - ತೃತೀಯ ಭಾಷೆ
ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
ಮಾರ್ಚ್ 1 - ಕನ್ನಡ, ಅರೇಬಿಕ್
ಮಾರ್ಚ್ 3 - ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್