ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಮಾರ್ಚ್/ಏಪ್ರಿಲ್ 2024ರ ಎಸ್ಎಸ್ಎಲ್ಸಿ ಪರೀಕ್ಷೆ-1ನ್ನು 25.03.2024 ರಿಂದ 06.04.2024ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (09.05.2024) ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಗುರುವಾರ ಬೆಳಗ್ಗೆ 10.30 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.