ಬೆಂಗಳೂರು:ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇಂದು ಸೇರಿದಂತೆ ಐದು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೈಅಲರ್ಟ್ ಮುಂದುವರೆಸಲಾಗಿದೆ. ಮೂರೂ ಜಿಲ್ಲೆಗಳಿಗೆ ನಾಳೆ ಮತ್ತು ನಾಡಿದ್ದು ರೆಡ್ ಅಲರ್ಟ್ ಹಾಗು ಇಂದು, ಜುಲೈ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು-ನಾಳೆ ಹಾಗೂ ಜುಲೈ 16 ಮತ್ತು 17 ರಂದು ಯೆಲ್ಲೋ ಹಾಗೂ ಜುಲೈ 15 ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ. ಧಾರವಾಡ ಜಿಲ್ಲೆಗೆ ಜುಲೈ 15 ರಂದು ಆರೆಂಜ್, ಜುಲೈ 15, 17, 18 ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಇಂದು ಸೇರಿದಂತೆ ಮೂರು ದಿನ, ಹಾವೇರಿ ಜಿಲ್ಲೆಗೆ 14 ಮತ್ತು 15 ಮತ್ತು 17 ರಂದು, ವಿಜಯಪುರ ಜಿಲ್ಲೆಗೆ ಜುಲೈ 14 ಮತ್ತು 15, ಯಾದಗಿರಿ ಜಿಲ್ಲೆಗೆ 13 ಮತ್ತು 14, ರಾಯಚೂರು ಜಿಲ್ಲೆಗೆ 14 ಮತ್ತು ಬಾಗಲಕೋಟೆ ಜಿಲ್ಲೆಗೆ ಜುಲೈ 15 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಉಳಿದಂತೆ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗೆ ನಾಳೆ ಮತ್ತು ನಾಡಿದ್ದು ರೆಡ್ ಅಲರ್ಟ್ ಹಾಗೂ ಜುಲೈ16, 17 ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ. ಕೊಡಗು ಜಿಲ್ಲೆಗೆ ಐದು ದಿನ, ಹಾಸನ ಜಿಲ್ಲೆಗೆ ಜುಲೈ 14 ಮತ್ತು 15 ರಂದು ಆರೆಂಜ್, ಇಂದು ಮತ್ತು ಜುಲೈ 16 ಮತ್ತು 17 ಕ್ಕೆ ಯೆಲ್ಲೋ, ಮೈಸೂರು ಜಿಲ್ಲೆಗೆ 14, 15, 16 ರಂದು ಯೆಲ್ಲೋ, ಜುಲೈ 15 ಮತ್ತು 16 ರಂದು ದಾವಣಗೆರೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಜುಲೈ 15 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಲಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯೂ ಇರಲಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಚಾಮರಾಜನಗರ ಜಿಲ್ಲೆಯಲ್ಲೂ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.