ಕರ್ನಾಟಕ

karnataka

ETV Bharat / state

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ನೇಮಕ - vijayananda kashappanavar

ಶಾಸಕ ವಿಜಯಾನಂದ ಕಾಶಪ್ಪನವರ್ ಅವ​ರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಸಿಎಂ ನೇಮಿಸಿದ್ದಾರೆ.

Eವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ನೇಮಕ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ನೇಮಕ

By ETV Bharat Karnataka Team

Published : Feb 17, 2024, 4:09 PM IST

ಬೆಂಗಳೂರು: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವ​ರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ರದ್ದುಪಡಿಸಿ, ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಸಿಎಂ ಸಿದ್ದರಾಮಯ್ಯ ನೇಮಿಸಿದ್ದಾರೆ.

ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಸಿಎಂ, ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ನೇಮಿಸಿ, ಅವರಿಗೆ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಆದೇಶ ಹೊರಡಿಸಲು ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಜ.26ರಂದು 34 ಕೈ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಆದರೆ ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಸರ್ಕಾರ ಎಡವಟ್ಟು ಮಾಡಿತ್ತು. ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿತ್ತು. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ.

ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ. ಅಂದರೆ ಕ್ರೀಡಾ ಸಚಿವ ನಾಗೇಂದ್ರ ಅವರೇ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಕೇವಲ ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಲು ಸರ್ಕಾರಕ್ಕೆ ಅವಕಾಶವಿರುತ್ತದೆ. ಆದರೆ ಸರ್ಕಾರ ಜ.26 ರಂದು ಹೊರಡಿಸಿರುವ ಆದೇಶದಲ್ಲಿ ವಿಜಯಾನಂದ ಕಾಶಪ್ಪನವರ್ ಅವರಿಗೆ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿತ್ತು. ಇದರಿಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅಸಮಾಧಾನಗೊಂಡಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಕಾಶಪ್ಪನವರ್ ಅವ​ರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ರದ್ದುಪಡಿಸಿ, ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ರಾಜಕಾರಣಿಗಳು ಇನ್ನೊಬ್ಬರಿಗೆ ಮಾದರಿಯಾಗಿರಬೇಕು: ಬಸವರಾಜ ಹೊರಟ್ಟಿ

ABOUT THE AUTHOR

...view details