ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 12ನೇ ತರಗತಿಯನ್ನು ಸಿಬಿಎಸ್‌ಇ, (ಜಮ್ಮು ಮತ್ತು ಕಾಶ್ಮೀರ ಸೇರಿದಂತೆ) ಸಿಐಎಸ್‌ಸಿಇ, 10+2, ಐಜಿಸಿಎಸ್‌ಇ ಮತ್ತಿತರ ಬೋರ್ಡ್ಗಳಲ್ಲಿ 2024 ರಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಮೇ 14 ರಿಂದ 20 ರವರೆಗೆ ಆನ್‌ಲೈನ್ ಪೋರ್ಟಲ್ ಲಿಂಕ್ ಅನ್ನು ಸಕ್ರಿಯಗೊಳಿಸಲಿದೆ.
ಅಭ್ಯರ್ಥಿಗಳು ಮೇ 20 ರ ಒಳಗೆ ಕಡ್ಡಾಯವಾಗಿ ತಮ್ಮ 12 ನೇ ತರಗತಿಯ ಅಂಕಗಳ ವಿವರಗಳನ್ನು ನಿಗದಿತ ಲಿಂಕ್‌ನಲ್ಲಿ ಅಂಕಗಳನ್ನು ದಾಖಲಿಸಿ, ಅಂಕಪಟ್ಟಿಯ ಪಿಡಿಎಫ್ ಪ್ರತಿಯನ್ನು ತಪ್ಪದೇ ಅಪ್‌ಲೋಡ್ ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
2024 ಕ್ಕಿಂತ ಹಿಂದಿನ ವರ್ಷಗಳಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಮತ್ತು 12 ನೇ ತರಗತಿಯನ್ನು ಉತ್ತೀರ್ಣರಾಗಿರುವವರೂ ಅಂಕಗಳನ್ನು ದಾಖಲಿಸಬೇಕು ಎಂದು ತಿಳಿಸಿದ್ದಾರೆ. ಅರ್ಹತಾ ಕಂಡಿಕೆ 'Ckause-Y' ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳೂ ಸಹ ಅಂಕಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಬೇಕು. ಕರ್ನಾಟಕ ದ್ವಿತೀಯ ಪಿಯುಸಿ 2024ರ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024ರ 'ನಾಟಾ' ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಲು ತಿಳಿಸಿದ್ದಾರೆ.
ಇದನ್ನೂ ಓದಿ:ಸಿಇಟಿ-2024: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಕೆಇಎ ಸೂಚನೆ - CET 2024