ಕರ್ನಾಟಕ

karnataka

ETV Bharat / state

ಯುಜಿಸಿಇಟಿ-24 ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಮೇ 7ರವರೆಗೆ ಕಾಲಾವಕಾಶ - UGCET Answer Key

ಯುಜಿಸಿಇಟಿ-2024 ತಾತ್ಕಾಲಿಕ ಸರಿ ಉತ್ತರ ಪ್ರಕಟಗೊಂಡಿದ್ದು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

kea-published-ugcet-24-answer-key-and-give-time-for-objection
ಯುಜಿಸಿಇಟಿ-24 ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಮೇ 7ರವರೆಗೆ ಕಾಲಾವಕಾಶ

By ETV Bharat Karnataka Team

Published : Apr 29, 2024, 9:07 PM IST

ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಯುಜಿಸಿಇಟಿ-2024 ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ಮೇ 7ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸಿಇಟಿ-2024ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ಕೆಇಎ ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ಏಪ್ರಿಲ್ 30ರ ಬೆಳಗ್ಗೆ 11.00 ರಿಂದ ಮೇ 07ರ ಬೆಳಗ್ಗೆ 11.00 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಪಠ್ಯ ಹೊರತಾದ ಪ್ರಶ್ನೆಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆಗಳ ವಿವರ ಹಾಗೂ ಪೂರಕ ಕಾರಣಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳನ್ನು ಅಂತಿಮವೆಂದು ಪರಿಗಣಿಸಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ ನೋಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ವಿದ್ಯಾರ್ಥಿಗಳು, ಯುವಕರ‌ ಭವಿಷ್ಯದ ಜೊತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟ: ಸುರೇಶ್ ಕುಮಾರ್ - S Suresh Kumar

ABOUT THE AUTHOR

...view details