ಕೊಡಗು :ಪ್ರವಾಸಕ್ಕೆ ಬಂದ ಕೇರಳ ಮೂಲದ ಯುವಕ ಫಾಲ್ಸ್ನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಚೇಲಾವರ ಫಾಲ್ಸ್ನಲ್ಲಿ ಸಂಭವಿಸಿದೆ.
ಚೆಯ್ಯಂಡಾಣೆ ಬಳಿಯ ಚೇಲಾವರ ಫಾಲ್ಸ್ನಲ್ಲಿ ಈ ದುರ್ಘಟನೆ ನಡೆದಿದೆ. ಕೇರಳದ ಮಟ್ಟನ್ನೂರು ನಿವಾಸಿ ಮಹಮ್ಮದ್ ಅಶ್ರಫ್ ಅವರ ಪುತ್ರ ರಶೀದ್ (25) ಎಂಬುವರು ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಮೂವರು ಸ್ನೇಹಿತರೊಂದಿಗೆ ಇಂದು ಚೇಲಾವರ ಜಲಪಾತ ವೀಕ್ಷಣೆಗೆಂದು ಬಂದಿದ್ದರು. ನಂತರ ಜಲಪಾತದಲ್ಲಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಇಬ್ಬರು ಸ್ನೇಹಿತರು ಕಾಪಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಸ್ಥಳದಲ್ಲಿ ಬೇರೆ ಯಾರೂ ಇಲ್ಲದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಜಲಪಾತದಿಂದ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲಕ್ಕೆತ್ತಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಶ್ರೀಧರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ :ದರ್ಗಾಕ್ಕೆ ಭೇಟಿ ನೀಡಲು ಬಂದು ಕೃಷ್ಣಾ ನದಿ ಪಾಲಾದ ಯುವಕ: ಮುಂದುವರಿದ ಶೋಧ