ಚಿಕ್ಕಮಗಳೂರು :ಜಿಲ್ಲೆಯ ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಖಾಂಡ್ಯ ಹೋಬಳಿಯ ಕೆಲವಾಲ ಸರ್ಕಾರಿ ಶಾಲೆಗೆ 15 ಅಡಿ ಉದ್ದದ ಕಾಳಿಂಗ ಸರ್ಪ ನುಗ್ಗಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಉರಗ ತಜ್ಞರು ಅದನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಲೆಗೆ ರಜೆ ಇದ್ದಿದ್ದರಿಂದ, ಮಕ್ಕಳು ಇರಲಿಲ್ಲ. ಹೀಗಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಸರ್ಕಾರಿ ಶಾಲೆಯ ಒಳಗೆ ಪ್ರವೇಶ ಮಾಡುತ್ತಿದ್ದ ಕಾಳಿಂಗ ಸರ್ಪ ನೋಡಿ, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.