ಕರ್ನಾಟಕ

karnataka

ETV Bharat / state

ರಸ್ತೆ ಅಪಘಾತದಲ್ಲಿ ಯುವಕ ಸಾವು; ಈ ದುರಂತಕ್ಕೆ ತಾನೇ ಕಾರಣ ಎಂದು ಬೈಕ್​ ಸವಾರ ಆತ್ಮಹತ್ಯೆ - ರಸ್ತೆ ಅಪಘಾತ

ರಸ್ತೆ ಅಪಘಾತಕ್ಕೆ ತಾನೇ ಕಾರಣವೆಂದು ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

man committed suicide  responsible for the accident  Kodagu  ರಸ್ತೆ ಅಪಘಾತ  ಬೈಕ್​ ಸವಾರ ಆತ್ಮಹತ್ಯೆ
ರಸ್ತೆ ಅಪಘಾತದಲ್ಲಿ ಯುವಕ ಸಾವು

By ETV Bharat Karnataka Team

Published : Feb 13, 2024, 12:20 PM IST

ರಸ್ತೆ ಅಪಘಾತದಲ್ಲಿ ಯುವಕ ಸಾವು

ಕೊಡಗು:ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್​ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಏನಿದು ಘಟನೆ:ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ‌ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್​ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಗಂಡನೊಂದಿಗೆ ಜಗಳ, ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ: ಬದುಕುಳಿದ ತಾಯಿ

ABOUT THE AUTHOR

...view details