ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (ETV Bharat) ಬೆಂಗಳೂರು: ಕೋಲ್ಕತ್ತಾ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲೂ ನಾಳೆ ಬೆಳಗ್ಗೆ 6 ಗಂಟೆಯಿಂದ ಭಾನುವಾರ 6 ಗಂಟೆಯವರೆಗೆ ಹೊರರೋಗಿಗಳ ಸೇವೆ ವಿಭಾಗ (ಒಪಿಡಿ) ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಲು ಖಾಸಗಿ ಆಸ್ಪತ್ರೆಗಳ ವೈದ್ಯರು ನಿರ್ಧರಿಸಿದ್ದಾರೆ.
ರಾಜ್ಯಾದ್ಯಂತ ಹೊರರೋಗಿ ಸೇವೆ ವಿಭಾಗ (ಒಪಿಡಿ) ಬಂದ್ ಮಾಡುವುದಾಗಿ ವೈದ್ಯರು ಘೋಷಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕದಿಂದ ನಡೆಸಲಿರುವ ಬಂದ್ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ವ್ಯಕ್ತಪಡಿಸಿದೆ. ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ಧಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, "ವೈದ್ಯರ ಮುಷ್ಕರದಿಂದಾಗಿ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮಕ್ಕೆ ಸೂಚಿಸಲಾಗಿದೆ. ಏನೆಲ್ಲ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂದು ಚರ್ಚಿಸಲು ಹೇಳಿದ್ದೇನೆ. ತೊಂದರೆಯಾಗದಂತೆ ಪ್ರತಿಭಟನೆ ಮಾಡುತ್ತೇವೆಂದು ವೈದ್ಯರು ಹೇಳಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು. ಎಲ್ಲಾ ಅಸೋಸಿಯೇಷನ್ ಸಭೆ ಕರೆದು ಕ್ರಮದ ಬಗ್ಗೆ ಚರ್ಚಿಸುತ್ತೇನೆ" ಎಂದು ಹೇಳಿದರು.
ಇದನ್ನೂ ಓದಿ:ವೈದ್ಯೆ ಅತ್ಯಾಚಾರ, ಕೊಲೆ ಖಂಡಿಸಿ ನಾಳೆ ದೇಶಾದ್ಯಂತ ಐಎಂಎ ಪ್ರತಿಭಟನೆ: ಹೊರರೋಗಿ ಸೇವೆ ಬಂದ್ - IMA Nationwide Protest