ಕರ್ನಾಟಕ

karnataka

ETV Bharat / state

ನಾನು ಮತದಾರರನ್ನು ಸ್ಯಾಡಿಸ್ಟ್‌ ಎಂದು ಕರೆದಿಲ್ಲ: ಎಂ.ಲಕ್ಷ್ಮಣ್ ಸ್ಪಷ್ಟನೆ - M Laxman - M LAXMAN

ಜನರಲ್ಲಿ ಸ್ಯಾಡಿಸ್ಟ್‌ ನೇಚರ್‌ ಆರಂಭವಾಗಿದೆ ಎಂದಷ್ಟೇ ಹೇಳಿರುವುದಾಗಿ ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ ಸ್ಪಷ್ಟೀಕರಣ ನೀಡಿದರು.

ಎಂ.ಲಕ್ಷ್ಮಣ್
ಎಂ.ಲಕ್ಷ್ಮಣ್ (ETV Bharat)

By ETV Bharat Karnataka Team

Published : Jun 12, 2024, 6:08 PM IST

ಮೈಸೂರು: ನಾನು ಮತದಾರರನ್ನು ಸ್ಯಾಡಿಸ್ಟ್‌ ಎಂದು ಕರೆದಿಲ್ಲ. ಸ್ಯಾಡಿಸ್ಟ್‌ ನೇಚರ್‌ ಆರಂಭವಾಗಿದೆ ಎಂದಷ್ಟೇ ಹೇಳಿದ್ದೇನೆ. ಮಾಧ್ಯಮಗಳು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥಮಾಡಿಕೊಂಡಿವೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.

ಇಂದು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಸ್ಕೀಮ್​ಗಳನ್ನು ನಿಲ್ಲಿಸಬೇಕೆಂದು ನಾನೆಂದೂ ಹೇಳಿಲ್ಲ. ಈ ಗ್ಯಾರಂಟಿ ಸ್ಕೀಮ್​ಗಳಲ್ಲಿರುವ ಕೆಲವು ನ್ಯಾನತೆಗಳನ್ನು ಸರಿಪಡಿಸಿ ಎಂದು ಹೇಳಿದ್ದೇನೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದರು.

ಕುಮಾರಸ್ವಾಮಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುತ್ತಾರಾ?: ಹೆಚ್.ಡಿ.ಕುಮಾರಸ್ವಾಮಿ ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಖಾತೆಯ ಸಚಿವರಾಗಿದ್ದಾರೆ. ಇವರು ರಾಜ್ಯಕ್ಕೆ ಕಾವೇರಿ ನೀರಿನ ವಿಚಾರವಾಗಿ ಆಗಿರುವ ಅನ್ಯಾಯ ಸರಿಪಡಿಸುತ್ತಾರಾ?. ಸಕ್ಕರೆ ಕಾರ್ಖಾನೆ ಸಮಸ್ಯೆ ಬಗೆಹರಿಸುತ್ತಾರಾ ಎಂದು ಪ್ರಶ್ನಿಸಿದ ಅವರು, ಮೇಕೆದಾಟು, ಮಹದಾಯಿ ಯೋಜನೆಗಳ ಸಮಸ್ಯೆಯನ್ನು ಬಗೆಹರಿಸಲಿ ಎಂದು ಒತ್ತಾಯಿಸಿದರು.

ಕೇಂದ್ರದಲ್ಲಿ ಮೋದಿ ನೇತೃತ್ವದ 3.0 ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕರ್ನಾಟಕದ ಐವರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆ. ಆದರೆ 17 ಜನ ಬಿಜೆಪಿ, ಇಬ್ಬರು ಜೆಡಿಎಸ್‌ ಸಂಸದರು ಗೆದ್ದಿದ್ದರೂ, ಕೇವಲ ಮೂರು ಸಮುದಾಯಕ್ಕೆ ಮಾತ್ರ ಮಂತ್ರಿಸ್ಥಾನ ನೀಡಲಾಗಿದೆ. ಉಳಿದ ಹಿಂದುಳಿದ ವರ್ಗಗಳನ್ನು ನಿರ್ಲಕ್ಷ್ಯ ಮಾಡಲಾಗಿದ್ದು, ಇಡೀ ದೇಶದಲ್ಲಿ ಬಿಜೆಪಿ ಇದೇ ರೀತಿ ತಾರತಮ್ಯ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಹೋದ ಕಡೆಯಲ್ಲೆಲ್ಲಾ ರಾಹುಲ್‌ ಗಾಂಧಿ ಅವರದ್ದು ಕುಟುಂಬ ರಾಜಕಾರಣವೆಂದು ಟೀಕೆ ಮಾಡುತ್ತಾರೆ. ಆದರೆ ಬಿಜೆಪಿ ಸರ್ಕಾರದಲ್ಲಿ 11 ಜನ ಸಂಸದರು ಕುಟುಂಬ ರಾಜಕಾರಣದಿಂದಲೇ ಬಂದಿದ್ದಾರೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣದ ದೊಡ್ಡ ಲಿಸ್ಟ್‌ ಇದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದು ಸರಿಯಲ್ಲ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಶಾಂತಿ, ಸುವ್ಯವಸ್ಥೆ ಇದೆ ಎಂದರು.

ಇದನ್ನೂ ಓದಿ:ಮುನ್ನೆಲೆಗೆ ಬಂದ ಜೆಡಿಎಸ್ ರಾಜ್ಯಾಧ್ಯಕ್ಷ ವಿಚಾರ: ಯಾರಿಗೆ ಸಿಗಲಿದೆ ಅಧ್ಯಕ್ಷ ಪಟ್ಟ? - JDS State President

ABOUT THE AUTHOR

...view details