ಶಿವಮೊಗ್ಗ: ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ. ಎಸ್ ಈಶ್ವರಪ್ಪ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಫೋಟೋವನ್ನು ಬಳಸಿಕೊಳ್ಳಬೇಕೆಂಬ ವಿಚಾರದ ಕುರಿತು ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಕೆವಿಯಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಕುರಿತು ಮೂಲಗಳ ಮಾಹಿತಿ ತಿಳಿದು ಬಂದಿದೆ.
ನರೇಂದ್ರ ಮೋದಿ ಅವರ ಫೋಟೋವನ್ನು ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದ್ದು, ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಸಂಬಂಧ ಸುದ್ದಿಗೋಷ್ಠಿಯೊಂದರಲ್ಲಿ ಹಾಲಿ ಸಂಸದ ಬಿ.ವೈ ರಾಘವೇಂದ್ರ ಅವರು ಪ್ರತಿಕ್ರಿಯಿಸಿ, ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಧಿಕೃತ ಅಭ್ಯರ್ಥಿ. ಮೋದಿಜಿ ಅವರ ಫೋಟೋವನ್ನು ಬಳಸಿಕೊಳ್ಳುವ ಹಕ್ಕು ಬಿಜೆಪಿಗೆ ಮಾತ್ರ ಇದೆ ಎಂದು ಹೇಳಿದ್ದರು.