ಚಿಕ್ಕಮಗಳೂರು:ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಐರಾವತ ಬಸ್ನಲ್ಲಿ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಮುಂಜಾನೆ ನಡೆದಿದೆ.
ಡ್ರೈವರ್-ಕಂಡಕ್ಟರ್ ಸೇರಿ 40 ಜನ ಪ್ರಯಾಣಿಕರನ್ನು ಹೊತ್ತ ಐರಾವತ ಎಸಿ ಸ್ಲೀಪರ್ ಬಸ್ ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು. ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನೇರಲಕೆರೆ ಕ್ರಾಸ್ ಬಳಿ ಬಸ್ ತಲುಪಿದಾಗ ಬಸ್ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಚಾಲಕ-ನಿರ್ವಾಹಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ರವಾನಿಸಿದರು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಆದರೂ ಬಸ್ ಶೇ. 90ರಷ್ಟು ಸುಟ್ಟು ಕರಕಲಾಗಿದೆ.