ಬೆಂಗಳೂರು:ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU) 2022- 23ನೇ ಸಾಲಿನ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿ, ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪ ಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ಹಾಗೂ ಬ್ರ್ಯಾಂಡಿಂಗ್ ಮತ್ತು ವರ್ಚಸ್ಸು ಅಭಿವೃದ್ಧಿ ಉಪಕ್ರಮ, ಸಿಬ್ಬಂದಿಯ ಕಲ್ಯಾಣಕ್ಕಾಗಿ ಪ್ರಶಸ್ತಿ ಲಭಿಸಿದೆ.
ನವದೆಹಲಿಯಲ್ಲಿ ಕೆಎಸ್ಆರ್ಟಿಸಿಗೆ 2022-23ನೇ ಸಾಲಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU) ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿ (National Transport Excellence Award) ಪ್ರದಾನ ಮಾಡಲಾಯಿತು. ಶುಕ್ರವಾರ ಸಂಜೆ ದೆಹಲಿಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ಕಚೇರಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯ ಕಾರ್ಯದರ್ಶಿ ಅನುರಾಗ್ ಜೈನ್, ಎಎಸ್ಆರ್ಟಿಯು ಉಪಾಧ್ಯಕ್ಷ ಡಾ. ಮಾಧವ್ ಖುಸೇಕರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ದೇಶಕ ಪರೇಶ್ ಗೋಯೆಲ್ ನಿಗಮಕ್ಕೆ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಯ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಉಪಕ್ರಮಕ್ಕಾಗಿ ಎರಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಬೆಂಗಳೂರು ಪ್ರಾದೇಶಿಕ ಕಾರ್ಯಾಗಾರದ ಕಾರ್ಯ ವ್ಯವಸ್ಥಾಪಕ ಯಶ್ವಂತ್ ಕುಮಾರ್ ಪಿ. ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಕೆಎಸ್ಆರ್ಟಿಸಿಗೆ ಲಭಿಸಿದ ರಾಷ್ಟ್ರೀಯ ಪ್ರಶಸ್ತಿ ಪಂಜಾಬ್ ನಾಯಕತ್ವ ಪ್ರಶಸ್ತಿ:ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪ ಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ಲಭಿಸಿದೆ. ಶುಕ್ರವಾರ ತಾಜ್ ಚಂಡೀಗಡ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚೀಮಾ ಬಾಯ್ಲರ್ಸ್ ಲಿಮಿಟೆಡ್ ಅಧ್ಯಕ್ಷ ಹರ್ಜಿಂದರ್ ಸಿಂಗ್ ಚೀಮಾ ಅವರು ನಿಗಮಕ್ಕೆ ಪಂಜಾಬ್ ನಾಯಕತ್ವ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸಮೂರ್ತಿ ಸಿ. ಈ ಹಾಗೂ ಕೇಂದ್ರ ಕಚೇರಿಯ ಅಂಕಿ ಅಂಶ ಅಧಿಕಾರಿ ಸ್ವರ್ಣ ಲತಾ ಎಂ ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಕೆಎಸ್ಆರ್ಟಿಸಿಗೆ ದೊರೆತ ರಾಷ್ಟ್ರೀಯ ಪ್ರಶಸ್ತಿ ಕೆಎಸ್ಆರ್ಟಿಸಿಗೆ 5 ರಾಷ್ಟ್ರೀಯ, 1 ಅಂತರಾಷ್ಟ್ರೀಯ ಪ್ರಶಸ್ತಿಯ ಗರಿ:ಮಾನವ ಸಂಪನ್ಮೂಲ ಉಪ ಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಗ್ರಾಹಕ ಸೇವಾ ಉಪಕ್ರಮಕ್ಕಾಗಿ ಉದ್ದಿಮೆಯ ಸ್ಟಾರ್ ಆಪ್ ಎಕ್ಸಲೆನ್ಸ್ ಪ್ರಶಸ್ತಿ, ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಸತತ ವಿನೂತನ ಉಪಕ್ರಮಗಳಿಗಾಗಿ ರಾಷ್ಟ್ರೀಯ ಅತ್ಯುತ್ತಮ ಉದ್ಯೋಗ ಬ್ರ್ಯಾಂಡ್ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮ ಸಾಧನೆಗಾಗಿ ಗೌರ್ನೆನ್ಸ್ ನೌ 10ನೇ ಸಾರ್ವಜನಿಕ ಉದ್ದಿಮೆಗಳ ಪ್ರಶಸ್ತಿ, ಈಶಾನ್ಯ ಭಾರತ ನಾಯಕತ್ವ ಪ್ರಶಸ್ತಿಯು ನಿಗಮಕ್ಕೆ ಅತ್ಯುತ್ತಮ ವಿನೂತನ ವಾಹನ ಸಮೂಹ ನಿರ್ವಹಣೆಗಾಗಿ ಲಭಿಸಿದ್ದು, ದಕ್ಷಿಣ ಆಫ್ರಿಕಾ ನಾಯಕತ್ವ ಪ್ರಶಸ್ತಿಯು ನಿಗಮಕ್ಕೆ ಅತ್ಯುತ್ತಮ ಉಪಕ್ರಮ ವರ್ಗದಡಿ ಬಸ್ ಬ್ರಾಂಡ್ ನಿರ್ವಹಣೆಗಾಗಿ ಲಭಿಸಿರುತ್ತದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ಎನ್ಸಿಪಿಸಿಆರ್ ಅಧಿಕಾರಿಗಳ ದಾಳಿ - 20 ಬಾಲಕಿಯರ ರಕ್ಷಣೆ