ಕರ್ನಾಟಕ

karnataka

ETV Bharat / state

ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದ ಸಿಎಂ: ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎಂದ ಹೆಚ್​ಡಿಕೆ - Bengaluru

ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಹೆಚ್​ಡಿಕೆ
ಮಾಜಿ ಸಿಎಂ ಹೆಚ್​ಡಿಕೆ

By ETV Bharat Karnataka Team

Published : Jan 29, 2024, 4:19 PM IST

ಬೆಂಗಳೂರು: ’’ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಅವರು, "ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ.." ಎಂದು ನೀವು ಸಮರ್ಥಿಸಿಕೊಳ್ಳುತ್ತೀರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ್ಲ. ಹೌದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

2ನೇ ಸಲ ಸಿಎಂ ಆಗಿ ಎಲ್ಲ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ, ಸರಿ. ಆದರೆ; ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ? ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ, ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು, ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ? ಇನ್ನು ಆ ನಿಮ್ಮ ಭಾಷಣ! ಅದನ್ನು ಭಾಷಣ ಎನ್ನಲು ಸಾಧ್ಯವೇ? ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ - ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಮಂಡ್ಯದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿಯಿಂದ ಪ್ರಚೋದನೆ: ಸಿಎಂ, ಡಿಸಿಎಂ ವಾಗ್ದಾಳಿ

ABOUT THE AUTHOR

...view details