ಕರ್ನಾಟಕ

karnataka

ETV Bharat / state

ಟಿ ನರಸೀಪುರದಲ್ಲಿ 13ನೇ ಕುಂಭಮೇಳ, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ - KUMBHA MELA

ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ ನಡೆಯಲಿದೆ.

kumbha-mela
ಟಿ ನರಸೀಪುರದಲ್ಲಿ 13ನೇ ಕುಂಭಮೇಳ (ETV Bharat)

By ETV Bharat Karnataka Team

Published : Feb 9, 2025, 6:14 PM IST

Updated : Feb 9, 2025, 6:49 PM IST

ಮೈಸೂರು : ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ ಜರುಗಲಿದೆ.

ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಇದಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ.12 ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ.

ಟಿ ನರಸೀಪುರದಲ್ಲಿನ ಕುಂಭಮೇಳಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ (ETV Bharat)

ಅಂದು ಬೆಳಗ್ಗೆ 9 ರಿಂದ 9.30 ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಭರದ ಸಿದ್ಧತೆ :ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತೆ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನು ನಿಯೋಜನೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಮಾಹಿತಿ ನೀಡಿದೆ.

ಧಾರ್ಮಿಕ ಕಾರ್ಯಕ್ರಮಗಳು : ಫೆ. 10 ರಂದು ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅತಿಥಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.

ಇದನ್ನೂ ಓದಿ :6 ವರ್ಷದ ಬಳಿಕ ಟಿ.ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ: ಕಾರ್ಯಕ್ರಮಗಳ ವಿವರ - KUMBH MELA

Last Updated : Feb 9, 2025, 6:49 PM IST

ABOUT THE AUTHOR

...view details