ಕರ್ನಾಟಕ

karnataka

ETV Bharat / state

ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ರಾಜ್ಯಸಭೆ ಕಣಕ್ಕೆ: ಹೆಚ್​​ಡಿಕೆ - ಕುಪೇಂದ್ರ ರೆಡ್ಡಿ ನಾಮಪತ್ರ

ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆಯ ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.

Etv Bharat
Etv Bharat

By ETV Bharat Karnataka Team

Published : Feb 15, 2024, 11:38 AM IST

ಬೆಂಗಳೂರು: ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿ ಮಾಡಿದ್ದಾರೆ. ಕುಪೇಂದ್ರ ರೆಡ್ಡಿ ಅವರಿಗೆ ಹೆಚ್ಚುವರಿ ಮತಗಳನ್ನು ಹಾಕಲಿದ್ದೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಇದೆ. ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸಲಹೆ ಕೊಟ್ಟಿದ್ದಾರೆ. ಮತಗಳ ಕೊರತೆ ಬಗ್ಗೆ ಚುನಾವಣೆ ವೇಳೆ ನಿರ್ಧಾರ ಆಗುತ್ತೆ. ಬಿಜೆಪಿ ಹಾಗೂ ಜೆಡಿಎಸ್​ಗೆ ಹೆಚ್ಚುವರಿ ಮತಗಳಿವೆ ಎಂದರು.

ಒಟ್ಟಾಗಿ ಗೆಲ್ಲುವ ನಿಟ್ಟಿನಲ್ಲಿ ಕೆಲಸ:ರಾಜ್ಯಸಭೆ ಚುನಾವಣೆಗೆ ಮೈತ್ರಿ ಅಭ್ಯರ್ಥಿ ಕಣಕ್ಕೆ ಇಳಿಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಎನ್​​ಡಿಎಗೆ ಸೇರಿದ ಬಳಿಕ ನಾವು ಜಂಟಿ ತೀರ್ಮಾನ ಮಾಡುತ್ತಿದ್ದೇವೆ. ಕೇಂದ್ರ ಹಾಗೂ ರಾಜ್ಯದ ಮುಖಂಡರು ಚರ್ಚೆ ಮಾಡಿ ಐದನೇ ಅಭ್ಯರ್ಥಿ ಕಣಕ್ಕೆ ಇಳಿಸಲು ತೀರ್ಮಾನ ಮಾಡಲಾಗಿದೆ ಎಂದರು. ಅದರಂತೆ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಜೆಡಿಎಸ್​​ಗೆ ಅವರದ್ದೇ ಆದ ಕಾರ್ಯತಂತ್ರ ಇದೆ. ನಾವು ಒಟ್ಟಾಗಿ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಚಂದ್ರಶೇಖರ್, ನಾಸೀರ್,​​ ಮಾಕೇನ್‌​ಗೆ ಕಾಂಗ್ರೆಸ್​ ಟಿಕೆಟ್

ABOUT THE AUTHOR

...view details