ಉತ್ತರ ಕನ್ನಡದಲ್ಲಿ ಮತ್ತೊಂದು ಗುಡ್ಡ ಕುಸಿತ (ETV Bharat) ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಇನ್ನೊಂದೆಡೆ, ಶಿರೂರು ಬಳಿ ಗುಡ್ಡ ಕುಸಿದ ದುರಂತದ ಬೆನ್ನಲ್ಲೇ ಕುಮಟಾದ ಬರ್ಗಿಯಲ್ಲಿಯೂ ಗುಡ್ಡ ಕುಸಿದಿದೆ.
ಕುಮಟಾದ ಬರ್ಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ, ಹೆದ್ದಾರಿಯ ಒಂದು ಬದಿಯ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.
ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 18) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಶಿರೂರು ಗುಡ್ಡ ಕುಸಿದು ಗಂಗಾವಳಿ ನದಿ ದಡದ 7 ಮನೆಗಳು ನೆಲಸಮ: ತವರಿಗೆ ಶವವಾಗಿ ಮರಳಿದ ಮಗಳು! - Shirur Hill Collapse