ಕರ್ನಾಟಕ

karnataka

ETV Bharat / state

ಕೆಲಸ ಮಾಡುತ್ತಿದ್ದ ಕಂಪನಿಯಿಂದಲೇ ₹22 ಲಕ್ಷ ಮೌಲ್ಯದ ಲ್ಯಾಪ್‌ಟಾಪ್‌ ಕಳವು: ಮಾಜಿ ಉದ್ಯೋಗಿ ಸೆರೆ - Laptop Theft Case

ಟೊಮ್ಯಾಟೊ ಬೆಳೆಗೆ ಉತ್ತಮ ಬೆಲೆ ಸಿಗದೆ ನಷ್ಟ ಅನುಭವಿಸಿದ್ದ ಆರೋಪಿ, ಸಾಲ ತೀರಿಸಲು ತಾನು ಕೆಲಸ ಮಾಡುತ್ತಿದ್ದ ಕಂಪೆನಿಯಿಂದಲೇ 50 ಲ್ಯಾಪ್​ಟಾಪ್​ಗಳನ್ನು ಕದ್ದು, ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Sep 17, 2024, 2:28 PM IST

ಬೆಂಗಳೂರು: ಕೆಲಸ ನೀಡಿದ್ದ ಕಂಪನಿಯಲ್ಲಿ ಲ್ಯಾಪ್‌ಟಾಪ್‌ ಕಳವು ಮಾಡಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಹೊಸೂರಿನ ಮುರುಗೇಶ್ ಬಂಧಿತ. ಈತನಿಂದ 22 ಲಕ್ಷ ರೂ. ಮೌಲ್ಯದ 50 ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.

ಬಿಸಿಎ ವ್ಯಾಸಂಗ ಮಾಡಿದ್ದ ಮುರುಗೇಶ್ ಫೆಬ್ರವರಿಯಲ್ಲಿ ಐಟಿಪಿಲ್ ಬಳಿಯಿರುವ ಕಂಪನಿಯೊಂದರಲ್ಲಿ ಸಿಸ್ಟಂ ಅಡ್ಮಿನ್ ಆಗಿ ಕೆಲಸ ಆರಂಭಿಸಿದ್ದ. ಆಗಸ್ಟ್ 22ರಿಂದ ಕೆಲಸಕ್ಕೆ ಬಾರದೆ ಗೈರಾಗಿದ್ದ. ಅನುಮಾನಗೊಂಡ ಕಂಪನಿಯವರು ಪರಿಶೀಲಿಸಿದಾಗ ಆರೋಪಿ ಕೆಲಸ ನಿರ್ವಹಿಸುತ್ತಿದ್ದಾಗ ಆತನ ಸುಪರ್ದಿಯಲ್ಲಿದ್ದ ಒಟ್ಟು 57 ಲ್ಯಾಪ್‌ಟಾಪ್‌ಗಳು ನಾಪತ್ತೆಯಾಗಿರುವುದು ಕಂಡು ಬಂದಿತ್ತು. ತಕ್ಷಣ ಕಂಪನಿಯ ಪ್ರತಿನಿಧಿ ವೈಟ್‌ಫೀಲ್ಡ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ತಮಿಳುನಾಡಿನ ಹೊಸೂರಿನ ರಾಘವೇಂದ್ರ ಚಿತ್ರಮಂದಿರದ ಬಳಿ ಸಿಸ್ಟಂ ಅಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸಾಲ ಮಾಡಿ ಹೊಸೂರಿನಲ್ಲಿರುವ ತನ್ನ 5 ಎಕರೆ ಜಮೀನಿನಲ್ಲಿ ಟೊಮ್ಯಾಟೊ ಬೆಳೆದಿದ್ದ ಆರೋಪಿಗೆ ಉತ್ತಮ ಬೆಲೆ ಸಿಗದೆ ಸಾಕಷ್ಟು ನಷ್ಟವಾಗಿತ್ತು. ಸಾಲ ತೀರಿಸಲು ಕಳ್ಳತನಕ್ಕಿಳಿದಿದ್ದ ಆರೋಪಿ ಕದ್ದ ಲ್ಯಾಪ್‌ಟಾಪ್‌ಗಳನ್ನು ರಿಪೇರಿ ಮತ್ತು ಮಾರಾಟ ಮಾಡುವ ಅಂಗಡಿಗೆ ಮಾರಾಟ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿ ಕಳವು ಮಾಡಿದ್ದುದರ ಪೈಕಿ 50 ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆಯಲಾಗಿದೆ‌. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಹಾಡಹಗಲೇ ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚಿದ ಕಳ್ಳರು - House Theft

ABOUT THE AUTHOR

...view details