ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಹಾಗೂ ಈ ಸಂಬಂಧ ವಿಶೇಷ ತನಿಖಾ ದಳವು (ಎಸ್‌ಐಟಿ) ನಡೆಸುತ್ತಿರುವ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸಲು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದ ಹಿರಿಯ ವಕೀಲರಾದ ಜಯ್ನಾ ಕೊಠಾರಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ, ಅದೇ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣ, ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ರೇವಣ್ಣ ಸೇರಿ ಹಲವರ ವಿರುದ್ಧ ದಾಖಲಾಗಿರುವ ಸಂತ್ರಸ್ತೆ ಅಪಹರಣ ಪ್ರಕರಣ, ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ಹೈಕೋರ್ಟ್‌ನಲ್ಲಿ ಎಸ್‌ಐಟಿ ಪರವಾಗಿ ವಾದಿಸಲು ಜಯ್ನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಅಭಿಯೋಜಕರನ್ನಾಗಿ ರಾಜ್ಯ ಸರ್ಕಾರ ನೇಮಿಸಿತ್ತು.