ಕರ್ನಾಟಕ

karnataka

By ETV Bharat Karnataka Team

Published : Feb 9, 2024, 8:10 PM IST

Updated : Feb 9, 2024, 10:01 PM IST

ETV Bharat / state

ತಾಕತ್ತಿದ್ದರೆ ಹೆಚ್.ಕೆ.ಪಾಟೀಲ್ ನನ್ನ ವಿರುದ್ಧ ಕೇಸ್​ ಹಾಕಲಿ: ಕೆ.ಎಸ್.ಈಶ್ವರಪ್ಪ

ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ‌ ಕೊಲ್ಲಿ ಎಂದು ದಾವಣಗೆರೆಯಲ್ಲಿ ನಾನು ನೀಡಿದ್ದ ಹೇಳಿಕೆಗೆ ಈಗಲೂ ಬದ್ಧ ಎಂದು ಮಾಜಿ ಸಚಿವ ಕೆ.ಎಸ್.​ಈಶ್ವರಪ್ಪ ಹೇಳಿದ್ದಾರೆ.

let-hk-patil-file-a-case-against-me-says-k-s-eshwarappa
ತಾಕತ್ತಿದ್ದರೆ ಹೆಚ್.ಕೆ.ಪಾಟೀಲ್ ನನ್ನ ವಿರುದ್ಧ ಕೇಸ್​ ದಾಖಲಿಸಲಿ: ಕೆ.ಎಸ್.ಈಶ್ವರಪ್ಪ ಸವಾಲು

ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ

ಶಿವಮೊಗ್ಗ:"ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ‌ ಕೊಲ್ಲಿ ಎಂದಿರುವ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ. ತಾಕತ್ತಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಲಿ" ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ದಾವಣಗೆರೆಯಲ್ಲಿ ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ಹೆಚ್.ಕೆ.ಪಾಟೀಲರಿಗೆ ತಾಕತ್ತಿದ್ದರೆ ಕೇಸ್ ಹಾಕಲಿ ಎಂದರು.

"ಸಂಸದ ಡಿ.ಕೆ‌.ಸುರೇಶ್​ ಅವರು ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಹೇಳಿಕೆ ನೀಡಿದ್ದಾರೆ. ಅದಕ್ಕೆ ವಿನಯ್ ಕುಲಕರ್ಣಿ ಹಾಗೂ ಡಿ.ಕೆ‌.ಶಿವಕುಮಾರ್ ಬೆಂಬಲ ನೀಡಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಇದನ್ನು ಖಂಡಿಸಿದ್ದಾರೆ. ಸಚಿವ ಹೆಚ್.ಕೆ.ಪಾಟೀಲ್ ತಂದೆ ರಾಷ್ಟ್ರ ಭಕ್ತರಾಗಿದ್ದವರು. ಅವರ ಬಗ್ಗೆ ಗೌರವ ಇದೆ. ಅವರು ಕೇಸ್ ಹಾಕಲಿ ಎಂದು ಆಗ್ರಹಿಸುತ್ತೇನೆ. ನ್ಯಾಯಾಲಯವು ದೇಶದ್ರೋಹಿಗಳಿಗೆ ಮನ್ನಣೆ ನೀಡುತ್ತದೋ, ರಾಷ್ಟ್ರ ಭಕ್ತರಿಗೆ ಮನ್ನಣೆ ನೀಡುತ್ತದೋ ಎಂಬುದು ಗೊತ್ತಾಗುತ್ತದೆ. ಕೋರ್ಟ್ ಯಾರಿಗೆ ಛೀಮಾರಿ ಹಾಕುತ್ತೆ ಅಂತ ಗೊತ್ತಾಗುತ್ತೆ" ಎಂದು ಹೇಳಿದರು.

"ರಾಜ್ಯದಲ್ಲಿ ಹನುಮ ಧ್ವಜದಲ್ಲಿ ಗೊಂದಲ ಉಂಟಾಗಲು ರಾಜ್ಯ ಸರ್ಕಾರದ ಧೋರಣೆಯೇ ಕಾರಣ. ಹನುಮ ಧ್ವಜ ವಿವಾದ ಕುರಿತು ಬಂದ್ ಯಶಸ್ವಿ ಆಗಿರುವುದರ ಬಗ್ಗೆ ಸಂತೋಷ ಆಗಿದೆ. ಬದಲಿಗೆ ಈ ದೇಶದಲ್ಲಿ ಹನುಮ ಧ್ವಜ ಹಾರಿಸಲು ಅವಕಾಶ ಇಲ್ಲವಲ್ಲ‌ ಎಂದು ಬೇಸರವಾಗುತ್ತಿದೆ. ಮುಂದೆ ಇದಕ್ಕೆ ಜನರೇ ಉತ್ತರ ನೀಡುತ್ತಾರೆ" ಎಂದಿರುವ ಅವರು, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಎಫ್​ಐಆರ್ ದಾಖಲಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, "ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಇದರ ಭಾಗವಾಗಿಯೇ ಪರೀಕ್ಷೆ ಸೇರಿದಂತೆ ಎಲ್ಲ ರೀತಿಯಲ್ಲೂ ಅವರಿಗೆ ಅನುಕೂಲ ಮಾಡಿಕೊಡುತ್ತಿದೆ. ಇದು ಸಹ ಅದರ ಒಂದು ಭಾಗವೇ ಆಗಿದೆ. ಅವರು ಎಷ್ಟೇ ಎಫ್​ಐಆರ್ ದಾಖಲಿಸಲಿ ನಾವು ಹೆದರುವುದಿಲ್ಲ. ರಾಷ್ಟ್ರಭಕ್ತರಾದ ನಾವು ಇದನ್ನು ಎದುರಿಸುತ್ತೇವೆ" ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲೂ ಕಮಿಷನ್ ಹಾವಳಿ ಮುಂದುವರೆದಿದೆ ಎಂಬ ಕೆಂಪಣ್ಣ ಹೇಳಿಕೆ ಬಗ್ಗೆ ಮಾತನಾಡಿ, "ಕೆಂಪಣ್ಣ ಅವರು ಕಾಂಗ್ರೆಸ್ ಏಜೆಂಟ್ ಎಂದು ಈ ಮುಂಚೆಯು ನಾನು ಹೇಳಿದ್ದೆ. ಅವರು ಈಗ ಮತ್ತೊಮ್ಮೆ ಕಮಿಷನ್ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಆದರೆ ಯಾವ ಇಲಾಖೆಯಲ್ಲಿ ಯಾವ ಅಧಿಕಾರಿಗಳು ಸಚಿವರು ಕಮಿಷನ್ ಕೇಳಿದ್ದಾರೆ ಎಂದು ಬಹಿರಂಗಪಡಿಸಲಿ. ತಾವು ಕಾಂಗ್ರೆಸ್ ಏಜೆಂಟ್ ಎಂಬ ಆರೋಪದಿಂದ ತಪ್ಪಿಸಿಕೊಳ್ಳಲು ಅವರು ಈಗ ನಾಟಕ ಮಾಡುತ್ತಿದ್ದಾರೆ. ಅವರ ಬಳಿ ದಾಖಲೆ ಇದ್ದರೆ ಸರ್ಕಾರಕ್ಕೆ, ಆಯೋಗಕ್ಕೆ ನೀಡಲಿ" ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ಶ್ವೇತಪತ್ರ ಬಿಡುಗಡೆ ವಿಚಾರಣೆವಾಗಿ ಪ್ರತಿಕ್ರಿಯಿಸಿ, "ರಾಜ್ಯದ ಕಾಂಗ್ರೆಸ್ ಸರ್ಕಾರ ಈ ವಿಷಯದಲ್ಲಿ ನಾಟಕ ಆಡುತ್ತಿದೆ. ಕೇಂದ್ರದ ಅನುದಾನ ಬಿಡುಗಡೆ ಕುರಿತು ಶ್ವೇತಪತ್ರ ಹೊರಡಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಆದರೆ ಈ ತನಕ ಅದನ್ನು ಅವರು ಹೊರಡಿಸಿಲ್ಲ. ಹೊರಡಿಸುವುದೂ ಇಲ್ಲ. ಶ್ವೇತಪತ್ರ ಬಿಡುಗಡೆ ಮಾಡಿದರೆ ವಾಸ್ತವಾಶ ತಿಳಿಯುತ್ತದೆ. ತಾವು ಸುಳ್ಳು ಹೇಳುತ್ತೇವೆ ಎಂದು ಜನರಿಗೆ ಗೊತ್ತಾಗುತ್ತದೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಶ್ವೇತಪತ್ರ ಹೊರಡಿಸುವುದಿಲ್ಲ" ಎಂದರು.

ಇದನ್ನೂ ಓದಿ:'ಅನ್ಯಾಯವಾದರೆ ಪ್ರತಿಭಟಿಸಬಾರದಾ? ಯಡಿಯೂರಪ್ಪನವರಂತೆ ಬಾಯಿ ಮುಚ್ಚಿಕೊಂಡಿರಬೇಕಾ?'

Last Updated : Feb 9, 2024, 10:01 PM IST

ABOUT THE AUTHOR

...view details