ಶಿವಮೊಗ್ಗ: "ಕೋವಿಡ್ ಹಗರಣದ ಕುರಿತು ರಾಜ್ಯ ಸರ್ಕಾರ ರಿಪೋರ್ಟ್ ರೆಡಿ ಮಾಡಿದೆ. ಆದರೆ ಈ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಕ್ಯಾಬಿನೆಟ್ನಲ್ಲಿ ಈ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂಬುದರ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಅದೇ ರೀತಿ ಕೆಂಪಣ್ಣ ಆಯೋಗ ವರದಿಯನ್ನು ಕ್ಯಾಬಿನೆಟ್ನಲ್ಲಿಟ್ಟು ಚರ್ಚೆ ಮಾಡಲಿ" ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (ETV Bharat) ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಕೆಂಪಣ್ಣ ವರದಿಯನ್ನು ಏಕೆ ಕ್ಯಾಬಿನೆಟ್ ಮುಂದೆ ತರದೇ ಬಿಟ್ಟಿದ್ದಾರೆ?" ಎಂದು ಪ್ರಶ್ನಿಸಿದರು.
ಮುಡಾ ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರ:"ಈ ಬಗ್ಗೆ ಮಾಧ್ಯಮದವರಿಗೆ ಎಲ್ಲಾ ಗೊತ್ತಿದೆ. ಮಾಧ್ಯಮದವರೇ ಎಲ್ಲಾ ಹೇಳುತ್ತಿದ್ದಾರೆ. ಈಗಾಗಲೇ ಹೈಕೋರ್ಟ್ನಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಆಗಿದೆ. ಸಿದ್ದರಾಮಯ್ಯ ಅವರ ಪರ ವಕೀಲರು ವಾದ ಮಾಡಲು ಇನ್ನೂ ಸಮಯ ಕೇಳುತ್ತಿದ್ದಾರೆ." ಎಂದರು.
VISL ನಿರ್ವಹಣೆಗೆ 10-15 ಸಾವಿರ ಕೋಟಿ ಬೇಕು:"VISL ಹಾಗು ವೈಜಾಗ್ ಬಗ್ಗೆ ನಮಗೆ ಕಮಿಟ್ಮೆಂಟ್ ಇದೆ. ಆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಯುತ್ತಿದೆ. ಕಾರ್ಖಾನೆ ಪುನಾರಂಭ ಮಾಡಲು 10-15 ಸಾವಿರ ಕೋಟಿ ಬೇಕಾಗಿರುವುದರಿಂದ ಸಮಯ ಹಿಡಿಯುತ್ತದೆ" ಎಂದರು.
ಕನ್ನಡ ಚಿತ್ರರಂಗದಲ್ಲಿ ಮೀಟೂ ವಿಚಾರ:"ಕನ್ನಡ ಚಿತ್ರರಂಗದಲ್ಲಿ ಮೀಟೂ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನಾನು ಮಾತನಾಡಲ್ಲ" ಎಂದು ಹೇಳಿದರು.
ಸಿಎಂ ಗೆ ವರದಿ ಸಲ್ಲಿಸಿದ್ದ ತನಿಖಾ ಆಯೋಗ:ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖಾ ವರದಿ ಕಳೆದ ಆ. 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿತ್ತು. ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ. ಕುನ್ಹಾ ಅವರ ನೇತೃತ್ವದ ನಿಯೋಗ ತಮ್ಮ ತನಿಖಾ ವರದಿಯನ್ನು ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿತ್ತು.
'ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದ ತನಿಖಾ ಆಯೋಗ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ' ಎಂದು ಕರ್ನಾಟಕ ಸಿಎಂ ಅವರ ಎಕ್ಸ್ ಖಾತೆಯಲ್ಲಿ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಶೀಲ್ಡ್ ಮಾಡಿರುವ ವರದಿ ಸಲ್ಲಿಕೆಯಾಗಿದೆ ಎಂದು ತಿಳಿಸಲಾಗಿತ್ತು.
ಕಾನೂನಾತ್ಮಕವಾಗಿ ಎದುರಿಸಿವೆ ಎಂದಿದ್ದ ಸುಧಾಕರ್; ''ಕೋವಿಡ್ ಕಾಲದಲ್ಲಿ ನಾನು ವೈದ್ಯಕೀಯ ಸಚಿವನಾಗಿದ್ದೆ, ಅಂತಃಕರಣದಿಂದ ಕೆಲಸ ಮಾಡಿದ್ದೇನೆ. ನಾನು ಯಾವುದೇ ಕಾನೂನುಬಾಹಿರ ಕೆಲಸ ಮಾಡಿಲ್ಲ. ಅಕ್ರಮ ಆರೋಪವನ್ನು ರಾಜಕೀಯ ಮತ್ತು ಕಾನೂನಾತ್ಮಕವಾಗಿ ಎದುರಿಸುತ್ತೇನೆ'' ಎಂದು ಹಾಲಿ ಬಿಜೆಪಿ ಸಂಸದ, ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರು ನ್ಯಾ. ಕುನ್ಹಾ ಅವರ ನಿಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ಪ್ರತಿಕ್ರಿಯಿಸಿದ್ದರು.
''ಕೋವಿಡ್ ಹಗರಣಗಳ ಆರೋಪ ಸಂಬಂಧ ನಿವೃತ್ತ ನ್ಯಾ.ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದ ಆಯೋಗದಿಂದ ಮಧ್ಯಂತರ ವರದಿಯನ್ನು ಸರ್ಕಾರ ಪಡೆದಿದೆ. ಎಲ್ಲ ಸೇರಿ ಗುಣಾಕಾರ, ಭಾಗಾಕಾರ ಎಲ್ಲ ಮಾಡಿದ್ದಾರೆ. ನಾನು ಯಾವುದೇ ಕಾನೂನುಬಾಹಿರ ಕೆಲಸ ಮಾಡಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿತ್ತು. ಯಾವುದೇ ತೀರ್ಮಾನವಿದ್ದರೂ ಅದರ ಮೂಲಕವೇ ತೆಗೆದುಕೊಳ್ಳುತ್ತಿದ್ದೆವು'' ಎಂದು ಸ್ಪಷ್ಟಪಡಿಸಿದ್ದರು.
ಇದನ್ನೂ ಓದಿ:ಕಾನೂನಾತ್ಮಕವಾಗಿ ಎಲ್ಲದಕ್ಕೂ ತಾರ್ಕಿಕ ಅಂತ್ಯ, ಬಿಜೆಪಿಯವರಿಗೆ ಅನುಮಾನ ಬೇಡ: ಪ್ರಿಯಾಂಕ್ ಖರ್ಗೆ - Covid Scam Report