ಕರ್ನಾಟಕ

karnataka

ETV Bharat / state

ಶಿವಮೊಗ್ಗ: ವೈಯಕ್ತಿಕ ದ್ವೇಷದ ಕೊಲೆ; ಮೂವರಿಗೆ ಜೀವಾವಧಿ ಶಿಕ್ಷೆ - Life Imprisonment - LIFE IMPRISONMENT

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಕೊಲೆಗೈದ ಮೂವರಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

MURDER CASE
ಮೂವರಿಗೆ ಜೀವಾವಧಿ ಶಿಕ್ಷೆ (ETV Bharat)

By ETV Bharat Karnataka Team

Published : Jul 4, 2024, 7:12 PM IST

ಶಿವಮೊಗ್ಗ:ವೈಯಕ್ತಿಕ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಕೊಲೆ‌ಗೈದ ಮೂವರು ಅಪರಾಧಿಗಳಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

2020ರಲ್ಲಿ ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮದ ಮಲ್ಲೇಶಪ್ಪ(39) ಎಂಬವರನ್ನು ಅದೇ ಗ್ರಾಮದ ರಿಯಾಸ್, ಮುನಿರಾಜು ಮತ್ತು ಅರುಣ್ ಎಂಬವರು ಕೊಲೆ ಮಾಡಿದ್ದರು. ಈ ಕುರಿತು ಮೃತನ ಸಹೋದರ ನೀಡಿದ ದೂರಿನ ಅನ್ವಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳ ಸಿದ್ದಾರಾಧ್ಯ ಹೆಚ್.ಜೆ, ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 20 ಸಾವಿರ ರೂ ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಅಭಿಯೋಜಕರಾದ ಮಮತಾ ಬಿ.ಎಸ್. ವಾದ ಮಂಡಿಸಿದ್ದರು.

ಇದನ್ನೂ ಓದಿ:'ಕೌಟುಂಬಿಕ ದೌರ್ಜನ್ಯ ಕಾಯಿದೆಯಡಿ ಸಲ್ಲಿಸಲಾದ ಅರ್ಜಿಯನ್ನು ಪ್ರತಿವಾದಿಗಳ ವಾದ ಆಲಿಸದೇ ವಜಾಗೊಳಿಸುವಂತಿಲ್ಲ' - Domestic Violence Cases

ABOUT THE AUTHOR

...view details