ಕರ್ನಾಟಕ

karnataka

ETV Bharat / state

ಜೀವ ಬೆದರಿಕೆ, ಜಾತಿನಿಂದನೆ ಆರೋಪ: ಶಾಸಕ ಮುನಿರತ್ನಗೆ 2 ದಿನ ಪೊಲೀಸ್ ಕಸ್ಟಡಿ - MLA Muniratna Arrest

ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶಿಸಿದೆ.

MLA MUNIRATNA
ಶಾಸಕ ಮುನಿರತ್ನ (ETV Bharat)

By ETV Bharat Karnataka Team

Published : Sep 15, 2024, 9:12 AM IST

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಆರ್​.ಆರ್.ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಶನಿವಾರ ಸಂಜೆ ಮುನಿರತ್ನ ಅವರನ್ನು ವೈಯಾಲಿ ಕಾವಲ್ ಠಾಣೆ ಪೊಲೀಸರು ಬಂಧಿಸಿದ್ದರು. ತಡರಾತ್ರಿ ಅವರಿಗೆ ಆರೋಗ್ಯ ತಪಾಸಣೆ ನಡೆಸಿ, ಭಾನುವಾರ ನಸುಕಿನ ಜಾವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.

ರಾತ್ರಿ ಮುನಿರತ್ನ ಅವರನ್ನು ಅಶೋಕನಗರ ಠಾಣೆಗೆ ಕರೆತಂದ ಪೊಲೀಸರು ಸುಮಾರು ಒಂದು ಗಂಟೆ ಕಾಲ ವಿಚಾರಣೆಗೊಳಪಡಿಸಿದ್ದರು. ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿ ಪ್ರಕಾಶ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ತನಿಖಾಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ಶಾಸಕ ಮುನಿರತ್ನ ಇದೆಲ್ಲವೂ ತಮ್ಮ ವಿರುದ್ಧದ ಷಡ್ಯಂತ್ರ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಸ್ಪಷ್ಟೀಕರಣ ನೀಡುವಂತೆ ಶಾಸಕ ಮುನಿರತ್ನಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್​​ - BJP Notice To MLA Muniratna

ABOUT THE AUTHOR

...view details