ಹುಬ್ಬಳ್ಳಿ:ಹುಬ್ಬಳ್ಳಿವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊರ್ವ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿರುವ ಘಟನೆ ನಡೆದಿದೆ. ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ ಕುಮಾರ ಶ್ರೀಪಾದ ಅವರಿಗೆ ಜೀವ ಬೆದರಿಕೆ ಮೇಲ್ ಬಂದಿದ್ದು, ಜೂನ್ 25ರಂದು ಸಂಜೆ 6.30ವೇಳೆ ಕಚೇರಿಯ ಇಮೇಲ್'ಗೆ LongLivepalestine@dnmx.org ಮೇಲ್ ಐಡಿಯಿಂದ ಜೀವ ಬೆದರಿಕೆ ಸಂದೇಶ ರವಾನೆಯಾಗಿದೆ.
ಸಂದೇಶದಲ್ಲಿ ನಾವು ನಿಮ್ಮನ್ನು ನಾಶ ಮಾಡುತ್ತೇವೆ. ಬೆಂಕಿಯಲ್ಲಿ ಎಸೆಯುತ್ತೇವೆ. ಉಸಿರುಗಟ್ಟಿ ಸಾಯುತ್ತೀರಾ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಸಂದೇಶ ಕಳುಹಿಸಲಾಗಿದೆ. ಸದ್ಯ ಈ ಕುರಿತು ಗೋಕುಲ್ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯ ಅಧಿಕಾರಿಗಳಿಂದ ಅಗತ್ಯ ಕ್ರಮ: ಟರ್ಮಿನಲ್ ಉಸ್ತುವಾರಿ ಪ್ರತಾಪ ಅವರಿಗೆ ಸಂದೇಶ ತೋರಿಸಿದ ರೂಪೇಶಕುಮಾರ ಅವರು, ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಿ, ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಕಲಬುರಗಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್ವೊಂದು ಬಂದಿತ್ತು. ಈ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಗೆ ಬಿಡದೇ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿತ್ತು.
ಇದನ್ನೂ ಓದಿ:ಕಲಬುರಗಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ; ಬಾಂಬ್ ಸ್ಕ್ವಾಡ್ನಿಂದ ತಪಾಸಣೆ - Bomb threat in airport