ಕರ್ನಾಟಕ

karnataka

ETV Bharat / state

ಯಾದಗಿರಿ: ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ಸಾವು, ಮುಗಿಲು ಮುಟ್ಟಿದ ಆಕ್ರಂದನ - Lightning Strike

ಯಾದಗಿರಿ ತಾಲೂಕಿನ ಜಿನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ನಾಲ್ವರು ಮೃತಪಟ್ಟ ದುರ್ಘಟನೆ ನಡೆದಿದೆ.

Lightning strikes four dead in Yadgir district
ಸಾಂದರ್ಭಿಕ ಚಿತ್ರ (File)

By ETV Bharat Karnataka Team

Published : Sep 23, 2024, 7:52 PM IST

ಯಾದಗಿರಿ :ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಜಿನಕೇರ ತಾಂಡಾದಲ್ಲಿ ನಡೆದಿದೆ. ಕೀಶನ್ ಜಾಧವ್ (25), ಚನ್ನಪ್ಪ ಜಾಧವ್ (18), ಸುನೀಬಾಯಿ ರಾಠೋಡ್​ (27), ನೇನು ಜಾಧವ್ (15) ಮೃತ ದುರ್ದೈವಿಗಳು.

ತಾಂಡಾದ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ಮಳೆ ಬಂದಿದ್ದರಿಂದ ಆಶ್ರಯಕ್ಕಾಗಿ ಜಮೀನಿನಲ್ಲಿರುವ ಚಿಕ್ಕದಾದ ಮುರಗಮ್ಮ ದೇವಿ ದೇವಸ್ಥಾನದಲ್ ದೇವಸ್ಥಾನದಲ್ಲಿ ಏಳೆಂಟು ಜನರು ಆಶ್ರಯ ಪಡೆದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿಯೇ ಭಾರೀ ಸದ್ದಿನೊಂದಿಗೆ ಸಿಡಿಲು ನೇರವಾಗಿ ಗುಡಿಗೆ ಅಪ್ಪಳಿಸಿದೆ. ಪರಿಣಾಮ ಒಳಗಿದ್ದವರ ಪೈಕಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಾರದಿಂದ ತಗ್ಗಿದ್ದ ಮಳೆ ಮತ್ತೆ ಚುರುಕು: ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Forecast

ABOUT THE AUTHOR

...view details