ಬೆಂಗಳೂರು:ವಿಜ್ಞಾನ ಲೋಕದ ಕೌತಕಗಳನ್ನು ಕಣ್ತುಂಬಿಕೊಳ್ಳಲು ಮಕ್ಕಳ ಬಳಿಯೇ ಲಿಲ್ ಬಿಗ್ ಫ್ಯಾಂಟಸಿಯ ಸೈನ್ಸ್ ಬಸ್ ವಿನ್ಯಾಸ ಮಾಡಲಾಗಿದೆ. ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ವಿಜ್ಞಾನವನ್ನು ಅನ್ವೇಷಿಸಿ ಅದರ ಅನುಭವ ಪಡೆದುಕೊಳ್ಳಲು ಐಟಿಸಿ ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿ ಈ ವಿನೂತನ ಸೈನ್ಸ್ ಬಸ್ ಅನ್ನು ಅನವರಣಗೊಳಿಸಲಾಗಿದೆ.
ಶುಕ್ರವಾರ ನಗರದ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಸ್ಕೂಲ್ನಲ್ಲಿ ಬಸ್ ಅನಾವರಣಗೊಳಿಸಿ ಮಾತಾನಾಡಿದ ಇಸ್ರೋ ಮಾಜಿ ಅಧ್ಯಕ್ಷ ಪ್ರಕಾಶ್ ರಾವ್, ಪ್ರತಿಯೊಂದು ಮಕ್ಕಳಲ್ಲೂ ವಿಶೇಷ ಪರಿಕಲ್ಪನೆಗಳಿರುತ್ತವೆ. ವಿಜ್ಞಾನದ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ. ಅವರ ಸೃಜನಶೀಲತೆಯನ್ನು ಉತ್ತೇಜಿಸಿ ಕಲ್ಪನೆಗೆ ಜೀವ ನೀಡುವ ಉದ್ದೇಶದಿಂದ ಸೈನ್ಸ್ ಬಸ್ ಅನ್ನು ಐಟಿಸಿ ತಂಡ ಬಿಡುಗಡೆ ಮಾಡಿದೆ. ಮಕ್ಕಳು ಈ ಬಸ್‌ನಲ್ಲಿ ತಮ್ಮ ಕಲ್ಪನೆಯನ್ನು ಜೀವಂತವಾಗಿ ಇರಿಸಿಕೊಳ್ಳಬಹುದಾಗಿದೆ. ವಿಜ್ಞಾನದ ಬಗ್ಗೆ ಹೆಚ್ಚು ತಿಳಿದುಕೊಳ್ಳಬಹುದಾಗಿದೆ. ಈ ರೀತಿಯ ಪ್ರಯತ್ನಗಳು ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಇನ್ನಷ್ಟು ಆಸಕ್ತಿ ಹಾಗೂ ಕುತೂಹಲ ಮೂಡಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಐಟಿಸಿ ಲಿಮಿಟೆಡ್ ಬಿಸ್ಕೆಟ್ಸ್ ಮತ್ತು ಕೇಕ್ಸ್ ಕ್ಲಸ್ಟರ್, ಫುಡ್ಸ್ ಡಿವಿಷನ್ ಸಿಒಒ ಅಲಿ ಹ್ಯಾರಿಸ್ ಶೇರ್ ಮಾತನಾಡಿ, ಈಗಿನ ಮಕ್ಕಳು ಸಾಕಷ್ಟು ಫ್ಯಾಂಟಸಿ ಆಲೋಚನೆಗಳನ್ನು ಹೊಂದಿರುತ್ತಾರೆ. ಅವರ ಆಲೋಚನೆಗಳಿಗೆ ತಕ್ಕಂತೆ ಐಟಿಸಿ ತಂಡ ಈ ವಿನೂತನ ಹಾಗೂ ಅತ್ಯಾಧುನಿಕ ತಂತ್ರಜ್ಞಾನದಿಂದ ಸೈನ್ಸ್ ಬಸ್‌ನನ್ನು ತಯಾರಿಸಿದೆ. ಇದರಿಂದ ಮಕ್ಕಳ ಫ್ಯಾಂಟಸಿ ಮತ್ತು ಕಲ್ಪನಾಶೀಲತೆಯನ್ನು ಪ್ರದರ್ಶಿಸಬಹುದಾಗಿದೆ.
ಈ ಬಸ್‌ನಲ್ಲಿ ಅಳವಡಿಸಿರುವ ತಂತ್ರಜ್ಞಾನದಲ್ಲಿ ಮಕ್ಕಳು ತಮಗೆ ಇಷ್ಟವಾದ ಚಿತ್ರ, ಕಾರ್ಟೂನ್ ಅಥವಾ ಯಾವುದೇ ಕಲೆಯನ್ನು ಇಲ್ಲಿ ತಮ್ಮ ಕೈಯಿಂದ ಬಿಡಿಸಿದರೆ ಅದು 3ಡಿ ಸಂವಾದಾತ್ಮಕ ಅಕ್ಷರಗಳಾಗಿ ಪರಿವರ್ತನೆಗೊಂಡು ಡಿಜಿಟಲ್ ರಚನೆಯಾಗಿ ಪರದೆ ಮೇಲೆ ಪ್ರದರ್ಶನಗೊಳ್ಳಲಿದೆ. ಇದು ಮಕ್ಕಳಿಗೆ ಮಾಯಾ ಲೋಕದ ಅನುಭವ ನೀಡುವ ಜೊತೆಗೆ ನಮ್ಮ ವಿಜ್ಞಾನದ ತಾಕತ್ತನ್ನು ತಿಳಿಸಲಿದೆ. ಈ ಮೂಲಕ ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಸಂಯೋಜಿಸುವ ಮೂಲ ಉದ್ದೇಶವನ್ನು ಒಳಗೊಂಡಿದೆ ಎಂದು ವಿವರಿಸಿದರು.
ಬಾಲಿವುಡ್ ನಟಿ ಮಂದಿರಾ ಬೇಡಿ ಮಾತನಾಡಿ, ನನ್ನ ಮಗಳಿಗೆ ಈಗ 8 ವರ್ಷ ವಯಸ್ಸಾಗಿದೆ. ಆಕೆಗೆ ಪ್ರತಿದಿನ ಒಂದೊಂದು ಇಮ್ಯಾಜಿನೇಷನ್ ಮಾಡಿಕೊಳ್ಳುತ್ತಾಳೆ. ಒಮ್ಮೆ ತಾನು ಪೈಲೆಟ್ ಆಗ ಬಯಸುವೆನ್ನುವ ಆಕೆ, ಮತ್ತೊಂದು ದಿನ ಚೇಫ್ ಆಗುವೆ ಎನ್ನುತ್ತಾಳೆ. ಹೀಗೆ ಮಕ್ಕಳ ಕಲ್ಪನೆಗಳು ದಿನದಿಂದ ದಿನಕ್ಕೆ ಬದಲಾಗುತ್ತಿರುತ್ತದೆ. ಅವರ ಕಲ್ಪನೆಗೆ ರೆಕ್ಕೆ ಪುಕ್ಕ ನೀಡುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಐಟಿಸಿ ತಂಡ ಈ ಪ್ರಯತ್ನ ಮಾಡುವ ಮೂಲಕ ಮಕ್ಕಳ ವಿನೂತನ ಕಲ್ಪನೆಗಳಿಗೆ ರೆಕ್ಕೆ ಕಟ್ಟಿದಂತಾಗಲಿದೆ ಎಂದರು. ಸಮಾರಂಭದಲ್ಲಿ ಸೇಂಟ್ ಜೋಸೆಫ್ ಶಾಲೆ ಪ್ರಾಂಶುಪಾಲ ರೋಹನ್ ಡಿ ಅಲ್ಮೇಡಾ, ನಿಮ್ಹಾನ್ಸ್‌ನ ಡೀನ್ ಡಾ. ಮೇಘಾ ಮಹಾಜನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.