ಧಾರವಾಡ:ಅಯೋಧ್ಯೆಯ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಧಾರವಾಡ ಜಿಲ್ಲೆಯಾದ್ಯಂತ ಸೋಮವಾರ ಮದ್ಯ ನಿಷೇಧ ಮಾಡಲಾಗಿದೆ. ಭಾನುವಾರ ಸಂಜೆ 6 ರಿಂದ ಜ.23 ಬೆಳಗ್ಗೆ 9ರ ವರೆಗೆ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಿ ಆದೇಶ ಮಾಡಲಾಗಿದೆ. ಅಬಕಾರಿ ಕಾಯ್ದೆ 1965ರ ಕಲಂ 21 (1) ಪ್ರಕಾರ ಆದೇಶ ಮಾಡಲಾಗಿದೆ. ಜಿಪಂ ಸಿಇಓ ಈ ಆದೇಶ ಹೊರಡಿಸಿದ್ದಾರೆ. ನಾಳೆ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ.
ಪ್ರಾಣ ಪ್ರತಿಷ್ಠಾಪನೆಗೆ ಅಯೋಧ್ಯೆ ಸಜ್ಜು: ಅಯೋಧ್ಯೆಯಲ್ಲಿ ಸೋಮವಾರ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಇಡೀ ದೇಶವೇ ದಿವ್ಯ ಕಾರ್ಯಕ್ರಮಕ್ಕೆ ಸಜ್ಜಾಗಿದೆ. ಇದನ್ನು ಕಣ್ತುಂಬಿಕೊಳ್ಳಲು ಕೆಲ ರಾಜ್ಯಗಳಲ್ಲಿ ಶಾಲೆ ಕಾಲೇಜು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಅಯೋಧ್ಯೆಯಲ್ಲಿ ಪೊಲೀಸ್ ಸರ್ಪಗಾವಲು: ನಾಳೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಮಜನ್ಮಭೂಮಿಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. 10 ಸಾವಿರಕ್ಕೂ ಅಧಿಕ ಸಿಸಿಟಿವಿ ಅಳವಡಿಕೆ, ಡ್ರೋನ್ಗಳಿಂದ ಇಡೀ ಪ್ರದೇಶದ ಮೇಲೆ ನಿಗಾ ವಹಿಸಲಾಗುತ್ತಿದೆ. ಪ್ರಾಣ ಪ್ರತಿಷ್ಠಾಪನೆ ಐತಿಹಾಸಿಕ ಕಾರ್ಯಕ್ರಮಕ್ಕೆ, ಉತ್ತರ ಪ್ರದೇಶ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಪ್ರತಿ ರಸ್ತೆಯಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಅಯೋಧ್ಯೆಗೆ ಭಕ್ತರ ದಂಡೇ ಹರಿದು ಬರುತ್ತಿರುವ ಇಲ್ಲಿನ ಧರ್ಮಪತ್, ರಾಮಪತ್‌ನಿಂದ ಹಿಡಿದು ಹನುಮಾನ್‌ಗಢಿ ಪ್ರದೇಶ, ಅಶರ್ಫಿ ಭವನ ರಸ್ತೆಯವರೆಗೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಟ್ರಾಫಿಕ್ ನಿಯಂತ್ರಣಕ್ಕೆ, ವಿಶೇಷವಾಗಿ ಗಣ್ಯರ ಆಗಮನದ ವೇಳೆ ಪೊಲೀಸರು ಮುಳ್ಳಿನ ಬ್ಯಾರಿಕೇಡ್ಗಳನ್ನು ಅಳಡಿಸುತ್ತಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ